ಮೈಸೂರು

ಮೈಸೂರು: ಸಮಸ್ಯೆ ಹೇಳಿದವನ ಮೇಲೆ ಶಾಸಕರಿಂದ ಹಲ್ಲೆ ಆರೋಪ

ಕೆ.ಆರ್.ನಗರ: ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮದ ವೇದಿಕೆಯ ಮೇಲೆ ಕಾರ್ಯಕರ್ತನಿಗೆ ಶಾಸಕ ರವಿಶಂಕರ್‌ ಕಪಾಳಮೋಕ್ಷ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ತಾಲ್ಲೂಕಿನ ದೊಡ್ಡೇಕೊಪ್ಪಲು ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವೇದಿಕೆಯಲ್ಲೇ ಇದ್ದ ಕಾಂಗ್ರೆಸ್‌ ಮುಖಂಡ ಮಹದೇವು ಎಂಬುವವರು ಗ್ರಾಮಕ್ಕೆ ಡೈರಿ ಕಟ್ಟಡವನ್ನು ನಿರ್ಮಿಸಿಕೊಡುವಂತೆ ಶಾಸಕರ ಬಳಿ ಮನವಿ ಮಾಡಿದರು.

ಮನವಿಯಿಂದ ಕೆಂಡಾಮಂಡಲರಾದ ಶಾಸಕ ರವಿಶಂಕರ್‌ ಅವರು ಮಹದೇವು ಅವರ ಕಪಾಳಕ್ಕೆ ಹೊಡೆದಿದ್ದಾರೆ ಎನ್ನಲಾಗಿದೆ.

ಇದನ್ನು ಓದಿ: ದರೋಡೆ ಸ್ಕೆಚ್‌ ರೂಪಿಸಿ ಪತಿ ಮೇಲೆ ಪತ್ನಿ ಹಲ್ಲೆ : ಕೊನೆಗೂ ಸಾವಿಗೀಡಾದ ಪತಿ

ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಶಾಸಕ ರವಿಶಂಕರ್‌ ಅವರು, ಆತ ನನಗೆ ಪರಿಚಿತ ಡೈರಿ ವಿಚಾರವಾಗಿ ಕೇಳುತ್ತಿದ್ದ. ಈತನ ಜೊತೆಗೆ ಬೇರೆಯವರು ಮಾತನಾಡುತ್ತಿದ್ದರು. ಸರಿಯಾಗಿ ಯಾರಿಗೆ ಏನೂ ಕೇಳಿಸುತ್ತಿರಲಿಲ್ಲ. ಹೀಗಾಗಿ ಈ ಕಡೆ ಬಾ ಎಂದು ಬೆನ್ನಿಗೆ ತಟ್ಟಿ ಕರೆದೆ. ನಾನು ಯಾವುದೇ ಹಲ್ಲೆ ಮಾಡುವುದಾಗಲಿ, ಆತನಿಗೆ ಹೊಡೆಯುವ ಕೆಲಸ ಮಾಡಿಲ್ಲ. ಈ ಬಗ್ಗೆ ನನ್ನ ವಿರುದ್ದ ಸುಖಾ ಸುಮ್ಮನೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇನ್ನು ಶಾಸಕರಿಂದ ಕಪಾಳಮೋಕ್ಷ ಮಾಡಿಸಿಕೊಂಡಿದ್ದಾನೆ ಎನ್ನಲಾದ ಕೆ..ಆರ್.ನಗರದ ಮಹದೇವ ಎಂಬುವವರೇ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದು, ಶಾಸಕರು ನನಗೆ ಹೊಡೆದಿಲ್ಲ. ಬೆನ್ನಿಗೆ ತಟ್ಟಿ ಪಕ್ಕಕ್ಕೆ ಕರೆದು ಕೂರಿಸಿದರು. ಅಂದು ಸಭೆಯಲ್ಲಿ ನಾನು ಡೈರಿ ವಿಚಾರವಾಗಿ ಸಮಸ್ಯೆ ಹೇಳುತ್ತಿದ್ದೆ. ಬೇರೆಯವರು ಬೇರೆ ಬೇರೆ ಸಮಸ್ಯೆ ಹೇಳುತ್ತಿದ್ದರು. ಎಲ್ಲವೂ ಗೊಂದಲಮಯವಾಗಿತ್ತು. ನಮ್ಮ ಶಾಸಕರಿಗೆ ಏನೂ ಕೂಡ ಕೇಳಿಸುತ್ತಿರಲಿಲ್ಲ. ನಾನು ಪಕ್ಕದಲ್ಲೇ ನಿಂತಿದ್ದೆ, ಬೆನ್ನು ತಟ್ಟಿ ಪಕ್ಕದಲ್ಲಿ ಕುಳಿತುಕೊಳ್ಳಲು ಹೇಳಿದರು. ಯಾವುದೇ ಹಲ್ಲೆ ಮಾಡಿಲ್ಲ. ಅದು ಸತ್ಯಕ್ಕೆ ದೂರವಾದ ಆರೋಪ. ನನ್ನ ಬೆನ್ನಿಗೆ ತಟ್ಟಿ ಪಕ್ಕಕ್ಕೆ ಕೂರಿಸಿದ್ದನ್ನು ಬಿಟ್ಟರೆ ಯಾವ ಗಲಾಟೆಯೂ ಆಗಿಲ್ಲ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

9 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

10 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

11 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

13 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

13 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

17 hours ago