ಮೈಸೂರು

ಮೈಸೂರು: ಜಾನುವಾರು ರಕ್ಷಣೆ ಹೆಸರಿನಲ್ಲಿ ಹಣ ವಸೂಲಿ: 7 ಮಂದಿ ಆರೋಪಿಗಳ ಬಂಧನ

ಮೈಸೂರು: ಜಾನುವಾರುಗಳ ಸಂರಕ್ಷಣೆ ಹೆಸರಿನಲ್ಲಿ ಹಣ ವಸೂಲಿಗಿಳಿದಿದ್ದ ಗ್ಯಾಂಗ್‌ನ್ನು ಹುಣಸೂರು ಪೊಲೀಸರು ಬಂಧಿಸಿದ್ದಾರೆ.

ಹಿಂದೂ ರಾಷ್ಟ್ರ ರಕ್ಷಣಾ ಪಡೆಯ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ ಹಾಗೂ ಓರ್ವ ಮಹಿಳೆ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ ಎರಡು ಕಾರುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಹಿಂದೂ ಸಂಘಟನೆ ಹೆಸರಿನಲ್ಲಿ ಜಾನುವಾರುಗಳನ್ನು ರಕ್ಷಣೆ ಮಾಡುವ ನೆಪ ಹೇಳಿ ಜಾನುವಾರು ಸಾಗಿಸುವ ವಾಹನಗಳನ್ನು ತಡೆದು ಹಣ ವಸೂಲಿ ಮಾಡುತ್ತಿತ್ತು ಎಂಬ ಆರೋಪ ಕೇಳಿಬಂದಿದೆ.

ರತ್ನಪುರಿಯ ಕಿರಣ್‌ ಎಂಬುವವರು ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆ ಸಂತೆಯಲ್ಲಿ ಮೂರು ಜಾನುವಾರುಗಳನ್ನು ಖರೀದಿಸಿ ವಾಹನದಲ್ಲಿ ಸಾಗಿಸುತ್ತಿದ್ದರು.

ಈ ವೇಳೆ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ಖದೀಮರು ಹುಣಸೂರಿನ ಕಟ್ಟೆಮಳಲವಾಡಿ ಬಳಿ ವಾಹನ ಅಡ್ಡಗಟ್ಟಿ ಕಸಾಯಿಖಾನೆಗೆ ಜಾನುವಾರು ಸಾಗಿಸುತ್ತಿದ್ದೀಯಾ? ಎಂದು ಕಿರಣ್‌ನನ್ನು ಬೆದರಿಸಿ ಹಣ ಕೊಡುವಂತೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

25 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದ ಖದೀಮರು, ಹಣ ಕೊಟ್ಟರೆ ಬಿಡುವುದಾಗಿ ಧಮ್ಕಿ ಹಾಕಿದ್ದರು. ಈ ವೇಳೆ ರಸ್ತೆಯಲ್ಲಿ ಸಾರ್ವಜನಿಕರು ಕೂಡ ಸೇರಿದ್ದು, ಆರೋಪಿಗಳನ್ನು ಪ್ರಶ್ನಿಸಿ ಗೂಸಾ ನೀಡಿದ್ದರು.

ಕಿರಣ್‌ ನೀಡಿದ ದೂರಿನ ಮೇರೆಗೆ ಈಗ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

10 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

10 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

11 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

11 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

11 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

11 hours ago