ಮೈಸೂರು

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಿರುವ ಜಿಲ್ಲೆಯ ವಿವಿಧ ಠಾಣೆಗಳ ಪೊಲೀಸರು, ಚಿನ್ನಾಭರಣ ಸೇರಿದಂತೆ 29.97 ಲಕ್ಷ ರೂ.ಮೌಲ್ಯದ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಸೋಮವಾರ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹುಣಸೂರು, ಕೆ.ಆರ್. ನಗರ, ನಂಜನಗೂಡು, ಬಿಳಿಕೆರೆ, ಬೆಟ್ಟದಪುರ, ಕವಲಂದೆ ಠಾಣೆಗಳಲ್ಲಿ ದಾಖಲಾಗಿದ್ದ 9 ಪ್ರಕರಣಗಳಲ್ಲಿ10.46 ಲಕ್ಷ ರೂ.ಮೌಲ್ಯದ 279 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಉಳಿದಂತೆ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ 6 ವಾಹನ ಕಳವು ಪ್ರಕರಣಗಳನ್ನು ಭೇದಿಸಿರುವ ಪೊಲೀಸರು 14,33 ಲಕ್ಷ ರೂ. ಮೌಲ್ಯದ 8 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. 3 ಪ್ರಕರಣಗಳಲ್ಲಿ 82 ಸಾವಿರ ರೂ. ವೌಲ್ಯದ ಹಾರ್ಡ್‌ವೇರ್ ಮತ್ತು ಎಲೆಕ್ಟ್ರಿಕ್ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ ಎಂದರು.

ಒಂದು ಪ್ರಕರಣದಲ್ಲಿ 58 ಸಾವಿರ ರೂ.ಮೌಲ್ಯದ ೨ ಜಾನುವಾರು ವಶಕ್ಕೆ ಪಡೆದಿರುವ ಪೊಲೀಸರು, ದುಷ್ಕರ್ಮಿಗಳಿಂದ 3.76 ಲಕ್ಷ ರೂ. ನಗದು ವಶಕ್ಕೆ ಪಡೆದಿದ್ದಾರೆ. ಇದರೊಂದಿಗೆ ಎನ್‌ಡಿಪಿಎಸ್ ಕಾಯ್ದೆಯಡಿ 55 ಪ್ರಕರಣ ದಾಖಲಿಸಿಕೊಂಡು 1 ಕೆಜಿ 860 ಗ್ರಾಂ ತೂಕದ ಗಾಂಜಾ ಮತ್ತು 0.11 ಎಂ.ಎಲ್. ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಜತೆಗೆ ಲಾಟರಿ ಕಾಯ್ದೆಯಡಿ 14 ಪ್ರಕರಣ ದಾಖಲಿಸಿಕೊಂಡು 2.26 ಲಕ್ಷ ರೂ. ಮೌಲ್ಯದ ಲಾಟರಿ ಟಿಕೆಟ್ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು. ಈ ಎಲ್ಲಾ ಪ್ರಕರಣಗಳಿಗೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದರು.

ತಂಡ ರಚನೆ
ಜಿಲ್ಲಾ ವ್ಯಾಪ್ತಿಯಲ್ಲಿ ನಡೆಯುವ ಅಪರಾಧ ತಡೆ ಹಾಗೂ ಪತ್ತೆಗಾಗಿ ಜಿಲ್ಲೆಯ ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇನ್‌ಸ್ಪೆಕ್ಟರ್, ಎಸ್‌ಐ ನೇತೃತ್ವದಲ್ಲಿ ನಾಲ್ಕರಿಂದ ಐದು ಮಂದಿ ಸಿಬ್ಬಂದಿಯ ಪ್ರತ್ಯೇಕ ತಂಡ ರಚಿಸಲಾಗಿದೆ. ಜಿಲ್ಲೆಯಲ್ಲಿ ದಾಖಲಾದ ಪ್ರಕರಣಗಳ ಪತ್ತೆಗೆ ಈ ತಂಡ ಕಾರ್ಯಾಚರಣೆ ನಡೆಸುವ ಮೂಲಕ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಎಎಸ್ಪಿಗಳಾದ ಎಲ್.ನಾಗೇಶ್, ಸಿ.ಮಲ್ಲಿಕ್, ಡಿವೈಎಸ್ಪಿಗಳಾದ ಜಿ.ಎಸ್.ರಘು, ರವಿ, ಟಿ.ಬಿ.ರಾಜಣ್ಣ ಹಾಜರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

42 mins ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

1 hour ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

2 hours ago

ಬೆಟ್ಟಳ್ಳಿ ಮಾರಮ್ಮನ ಜಾತ್ರೆ ; ಹನೂರಲ್ಲಿ 2 ದಿನ ಮದ್ಯ ಮಾರಾಟ ನಿಷೇಧ

ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು…

2 hours ago

ಕೆ.ಆರ್.ಆಸ್ಪತ್ರೆಯಲ್ಲಿ 100 ಹಾಸಿಗೆಯುಳ್ಳ ICU ಘಟಕ ಸ್ಥಾಪಿಸಿ : ಎಂಎಲ್‌ಸಿ ಕೆ.ಶಿವಕುಮಾರ್ ಮನವಿ

ಬೆಂಗಳೂರು : ಮಂಡ್ಯ, ಚಾಮರಾಜನಗರ, ಹೊಳೆನರಸೀಪುರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತುರ್ತು ಸೇವೆಗಳ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ…

3 hours ago

ಈವರೆಗೂ ಇರಾನ್‌ನಿಂದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ: ಸಚಿವ ಜೈಶಂಕರ್‌

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್‌…

5 hours ago