ಮೈಸೂರು

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 32 ವರ್ಷದ ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.

ಮೈಸೂರಿನ ಎಫ್‌ಟಿಎಸ್‌ಸಿ–1 ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, ನ್ಯಾಯಾಧೀಶರಾದ ಆನಂದ್ ಪಿ. ವಘಾಢೆ ಅವರು ಶಿಕ್ಷೆ ಪ್ರಕಟಿಸಿದ್ದಾರೆ.

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಬಲೂನ್ ಮಾರಾಟಕ್ಕೆ ಬಂದಿದ್ದ ಕುಟುಂಬದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರವೆಸಗಿ ಕೊಲೆ ಮಾಡಲಾಗಿತ್ತು. ಈ ಘಟನೆ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

ಪ್ರಕರಣ ಸಂಬಂಧ ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯದ ವಿಚಾರಣೆಯಲ್ಲಿ ಅಪರಾಧ ಸಾಬೀತಾಗಿದ್ದು, ಇದೀಗ ಆರೋಪಿ ಕಾರ್ತಿಕ್‌ಗೆ ಮರಣದಂಡನೆ ವಿಧಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

58 seconds ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

47 mins ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

4 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

4 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

4 hours ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

4 hours ago