ಮೈಸೂರು : ವರ್ಷಾಂತ್ಯಕ್ಕೆ 1 ಲಕ್ಷ ಇ-ಖಾತೆ ವಿತರಿಸುವ ಗುರಿಯನ್ನು ಹೊಂದಲಾಗಿದೆ ಎಂದು ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಹೇಳಿದರು.
ವಿಶ್ವೇಶ್ವರನಗರದ ಬಿಲ್ಡರ‍್ಸ್ ಅಸೋಸಿಯೇಷನ್ ಸಭಾಂಗಣದಲ್ಲಿ ನಗರಪಾಲಿಕೆ ವಲಯ ಕಚೇರಿ-2ರ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅರ್ಜಿದಾರರಿಗೆ ಇ-ಖಾತೆ ವಿತರಿಸಿ ಮಾತನಾಡಿದ ಅವರು,
ಪಾಲಿಕೆ ವತಿಯಿಂದ ಈಗಾಗಲೇ 52,658 ಇ-ಖಾತೆಗಳನ್ನು ವಿತರಿಸಲಾಗಿದೆ. ವರ್ಷಾಂತ್ಯಕ್ಕೆ 1 ಲಕ್ಷ ಇ-ಖಾತೆ ವಿತರಿಸುವ ಗುರಿ ಹಾಕಿಕೊಳ್ಳಲಾಗಿದೆ ಎಂದರು.
ಪ್ರತಿ ಶುಕ್ರವಾರ ಎಲ್ಲ ವಲಯ ಕಚೇರಿಗಳಲ್ಲಿ ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಜನಸ್ಪಂದನ ಕಾರ್ಯ ಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ನಗರಪಾಲಿಕೆಯ ಒಂಬತ್ತು ವಲಯ ಕಚೇರಿಗಳಲ್ಲಿ ಇ-ಖಾತೆ ವಿತರಿಸಲಾಗುತ್ತಿದೆ. ಸಾರ್ವಜನಿಕರು ಅರ್ಜಿ ಸಲ್ಲಿಸುವಾಗ ಪೂರ್ಣ ದಾಖಲೆಗಳನ್ನು ಸಲ್ಲಿಸಬೇಕು. ಮಧ್ಯವರ್ತಿಯ ಮೊರೆ ಹೋಗಬಾರದು ಎಂದು ಹೇಳಿದರು.
ಉಪ ಆಯುಕ್ತ ಜಿ.ಎಸ್.ಸೋಮಶೇಖರ್, ವಲಯ ಆಯುಕ್ತ ಗಿರೀಶ್, ಪರಿಸರ ಅಭಿಯಂತರರಾದ ಮಹದೇವಮ್ಮ, ವೆಂಕಟೇಶ್, ಕಂದಾಯ ಅಽಕಾರಿ ಬೆಟ್ಟಸ್ವಾಮಯ್ಯ, ಸಹಾಯಕ ಕಂದಾಯಾಽಕಾರಿ, ಕಂದಾಯ ನಿರೀಕ್ಷಕರು, ಆರೋಗ್ಯ ನಿರೀಕ್ಷಕರು ಹಾಜರಿದ್ದರು.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…