ಮೈಸೂರು

ಮೈಸೂರು ಮುಡಾ ಹಗರಣ: ಇಂದು ಸಿಎಂ ಸಿದ್ದರಾಮಯ್ಯ ಪಾಲಿಗೆ ಬಿಗ್‌ ಡೇ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್‌ ಡೇ ಆಗಿದ್ದು, ಸಿಎಂ ಮತ್ತೆ ಮುಡಾ ಕುಣಿಕೆಗೆ ಸಿಲುಕುತ್ತಾರಾ ಎಂಬ ಪ್ರಶ್ನೆ ಎದ್ದಿದೆ.

ಮೈಸೂರು ಮುಡಾ ವಿಚಾರದಲ್ಲಿ ಸಿಎಂ ಹಾಗೂ ಅವರ ಕುಟುಂಬಕ್ಕೆ ಲೋಕಾಯುಕ್ತರು ನೀಡಿರುವ ಕ್ಲೀನ್‌ಚಿಟ್‌ ಪ್ರಶ್ನಿಸಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅರ್ಜಿ ಹಾಕಿದ್ದರು.

ಇ.ಡಿ ಕೂಡ ಲೋಕಾಯುಕ್ತ ವರದಿ ಪ್ರಶ್ನಿಸಿ ಅರ್ಜಿ ಹಾಕಿತ್ತು. ಎಲ್ಲರ ವಾದ ಆಲಿಸಿರುವ ನ್ಯಾಯಾಲಯ ಇಂದು ಲೋಕಾಯುಕ್ತ ವರದಿ ಒಪ್ಪಿಕೊಳ್ಳಬೇಕಾ ಅಥವಾ ತಿರಸ್ಕರಿಸಬೇಕಾ ಎಂಬ ಆದೇಶ ನೀಡಲಿದೆ.

ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್‌ ಡೇ ಆಗಲಿದ್ದು, ಒಂದು ವೇಳೆ ಲೋಕಾಯುಕ್ತ ವರದಿಯನ್ನು ಕೋರ್ಟ್‌ ತಿರಸ್ಕಾರ ಮಾಡಿದರೆ ಸಿದ್ದುಗೆ ಭಾರೀ ಸಂಕಷ್ಟ ಎದುರಾಗಲಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲರ ಚಿತ್ತ ಕೋರ್ಟ್‌ ತೀರ್ಪಿನತ್ತ ನೆಟ್ಟಿದೆ.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

7 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

7 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

7 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

7 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

7 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

9 hours ago