ಮೈಸೂರು: ಕಳೆದ ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದ ಮನೆಯೊಂದರ ಮೇಲೆ ವಿದ್ಯುತ್ ಕಂಬ ಹಾಗೂ ಮರ ಉರುಳಿಬಿದ್ದಿವೆ.
ಮೈಸೂರಿನ ಬೃಂದಾವನ ಬಡಾವಣೆಯ ಪ್ರಿಯದರ್ಶಿನಿ ಆಸ್ಪತ್ರೆ ಬಳಿಯಿರುವ ಮನೆಯೊಂದರ ಮೇಲೆ ಮರ ಹಾಗೂ ವಿದ್ಯುತ್ ಕಂಬ ಉರುಳಿಬಿದ್ದಿದ್ದು, ವಿದ್ಯುತ್ ತಂತಿ ಮನೆ ಮೇಲೆ ಸುರುಳಿ ಸುತ್ತಿಕೊಂಡು ಬಿದ್ದಿದೆ. ಆ ಸಮಯದಲ್ಲಿ ವಿದ್ಯುತ್ ಸಂಪರ್ಕ ಕಡಿತವಾದ್ದರಿಂದ ಮುಂದೆ ಆಗಬಹುದಾದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಇದನ್ನೂ ಓದಿ:- ನಂಜನಗೂಡಿನಲ್ಲಿ ಸುರಿದ ಧಾರಾಕಾರ ಮಳೆ: ಧರೆಗುರುಳಿದ ಬೃಹತ್ ಗಾತ್ರದ ಮರಗಳು
ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಮನೆ ಮಾಲೀಕರು ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮರವನ್ನು ತೆರವುಗೊಳಿಸುವಂತೆ ಪಾಲಿಕೆಗೆ ಪದೇ ಪದೇ ಮನವಿ ಮಾಡಿದ್ದರೂ ಏನೂ ಪ್ರಯೋಜನವಾಗಿಲ್ಲ. ಅಧಿಕಾರಿಗಳು ನಮಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:- ಕೊಡಗಿನಲ್ಲಿ ರಾತ್ರಿ ಸುರಿದ ಮಳೆಗೆ ಭಾರೀ ಅವಾಂತರ
ವಿಷಯ ತಿಳಿದು ಸ್ಥಳಕ್ಕಾಗಮಿಸಿ ನಗರ ಪಾಲಿಕೆ ಮಾಜಿ ಸದಸ್ಯ ಎಸ್‌ಬಿಎಂ ಮಂಜು ಅವರು ಪರಿಶೀಲನೆ ನಡೆಸಿದ್ದು, ಪಾಲಿಕೆ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿ ಮರ ತೆರವುಗೊಳಿಸುತ್ತೇವೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದ್ದಾರೆ.





