ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿಎಚ್.ಡಿ ನಡೆಸಲು ಸಂಶೋಧನಾ ಮಾರ್ಗದರ್ಶಕರ ಕೊರತೆ ಇರುವುದನ್ನು ನೀಗಿಸಿ ಹೆಚ್ಚುವರಿ ಪಿಎಚ್.ಡಿ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘ ಮತ್ತು ಪಿಎಚ್.ಡಿ ಆಕಾಂಕ್ಷಿಗಳು ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.
ನಗರದ ಕಾಫ್ರಡ್ ಭವನ ಮುಂಭಾಗ ಮಂಗಳವಾರ ಬೆಳಗಿನಿಂದಲೇ ಆರಂಭವಾದ ಪ್ರತಿಭಟನೆಗೆ ಸಂಶೋಧನ ವಿದ್ಯಾರ್ಥಿಗಳು, ಪಿಎಚ್.ಡಿ ಆಕಾಂಕ್ಷಿಗಳು ಜಮಾವಣೆಗೊಂಡ ವಿವಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರು ವಿವಿಯಲ್ಲಿ ಪಿಎಚ್.ಡಿ ಮಾರ್ಗದರ್ಶಕ ಕೊರತೆ ಹೇರಳವಾಗಿದೆ. ಇದರಿಂದ ಹೊಸದಾಗಿ ಪಿಎಚ್.ಡಿ. ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗೆ ತೊಡಕಾಗಿ ವಿದ್ಯಾರ್ಥಿಗಳ ಬದುಕು ಸಂಕಷ್ಟಕ್ಕೆ ಸಿಲುಕಿದೆ ಎಂದು ದೂರಿದರು.
ಪ್ರಾಧ್ಯಾಪಕರ ಕೊರತೆ ;
ಪಿಎಚ್.ಡಿ., ಕೆ-ಸೆಟ್, ನೆಟ್, ಜೆಆರ್‌ಎಫ್ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ವಿವಿಯಲ್ಲಿ ಪಿಎಚ್.ಡಿ. ಅಧ್ಯಯನಕ್ಕೆ ಅವಕಾಶ ಇಲ್ಲದಂತಾಗಿದೆ. ಆದ್ದರಿಂದ ಈಗಿರುವ ಖಾಯಂ ಪ್ರಾಧ್ಯಾಪಕರ ಬಳಿಯೇ ಮಾರ್ಗದರ್ಶನ ಪಡೆಯಲು ಅವಕಾಶ ಕೊಡಬೇಕು. ಪಿಎಚ್.ಡಿ. ಅಭ್ಯರ್ಥಿಗಳ ಹಿತದೃಷ್ಟಿಯಿಂದ ಮಾರ್ಗದರ್ಶಕರಿಗೆ ನಿಗದಿಪಡಿಸಿರುವ ವಿದ್ಯಾರ್ಥಿಗಳ ಸಂಖ್ಯೆಯ ಮಿತಿಯನ್ನು ಹೆಚ್ಚಿಸಬೇಕು ಎಂದು ಪ್ರತಿಭಟನಾಕರರು ಆಗ್ರಹಿಸಿದರು.
ಸಂಶೋಧನಾ ಆಕಾಂಕ್ಷಿಗಳ ಬೇಡಿಕೆಗಳು ;
ಪಿಎಚ್.ಡಿ. ಮಾರ್ಗದರ್ಶನಕ್ಕೆ ಹೆಚ್ಚುವರಿ ದಾಖಲಾತಿ ಕೊಡಬೇಕು. ವಿಶ್ವವಿದ್ಯಾನಿಲಯದ ಎಲ್ಲಾ ವಿಭಾಗಗಳಲ್ಲೂ ಪಿಎಚ್.ಡಿ. ಮಾರ್ಗದರ್ಶಕರ ಕೊರತೆ ಇದೆ. ಹಾಗಾಗಿ ಕೇಂದ್ರದ ಯುಜಿಸಿ ಮಾರ್ಗಸೂಚಿಯ ಪ್ರಕಾರ ಇತರೆ ವಿವಿಗಳ ಸಾಮಾಜಿಕ ಅಧ್ಯಯನ ಒಳಗೊಳ್ಳುವಿಕೆ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರುಗಳಿಗೆ ಹೆಚ್ಚುವರಿ ಅವಕಾಶ ನೀಡಿದ್ದು, ಇಲ್ಲಿಯೂ ಆ ಮಾದರಿಯನ್ನು ಅನುಸರಿಸಬೇಕು ಎಂದು ಒತ್ತಾಯಿಸಿದರು.
ಇದರಿಂದ ವಿವಿಗೆ ಯಾವುದೇ ಆರ್ಥಿಕ ಹೊಣೆಗಾರಿಕೆ ಇರುವುದಿಲ್ಲ. ಶೈಕ್ಷಣಿಕ ಪ್ರಗತಿಯ ದೃಷ್ಟಿಯಿಂದ ಇತರೆ ಸಹ ಪ್ರಾಧ್ಯಾಪಕರಿಗೂ ಪಿಎಚ್.ಡಿ.ಗೆ ಮಾರ್ಗದರ್ಶನ ನೀಡಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಮಳೆಯನ್ನು ಲೆಕ್ಕಸದೇ ಧರಣಿ;
ಮಂಗಳವಾರ ಬೆಳಿಗ್ಗೆ 11ರ ವೇಳೆಯಿಂದ ಆರಂಭವಾದ ಪ್ರತಿಭಟನೆಗೆ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸದ ಕಾರಣ ದಲಿತ ಸಂಘರ್ಷ ಸಮಿತಿಯ ಸಂಚಾಲಕ ಚೋರನಹಳ್ಳಿ ಶಿವಣ್ಣ ಅವರ ನೇತೃತ್ವದಲ್ಲಿ ಆಹೋರಾತ್ರಿ ಧರಣಿ ನಡೆಯುತ್ತಿದೆ. ಮಳೆಯನ್ನು ಲೆಕ್ಕಸದೇ ಹೋರಾಟಗಾರರು ಧರಣಿ ಮುಂದುವರಿಸಿದ್ದಾರೆ.
ಮಾಜಿ ಮಹಾಪೌರ ಪುರುಷೋತ್ತಮ್, ಸಂಶೋಧಕರ ಸಂಘದ ಅಧ್ಯಕ್ಷ ಶಿವಶಂಕರ್, ವಿಶ್ವ ಪ್ರಸಾದ್, ಉಪಾಧ್ಯಕ್ಷ ಪಿ.ಮರಹಳ್ಳಿ, ಪ್ರದೀಪ್, ಮಹೇಶ್, ರೋಹನ್, ರೋಜಾ ಸೇರಿದಂತೆ ಸಂಶೋಧನಾ ಆಕಾಂಕ್ಷಿಗಳು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ.
ಮೈಸೂರು: ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಎಂಎಲ್‌ಸಿ ಹಾಗೂ ಮಾಜಿ ಸಚಿವ ಕೆ.ಎನ್.ರಾಜಣ್ಣ ಪುತ್ರ ರಾಜೇಂದ್ರ ಹೇಳಿದ್ದಾರೆ.…
ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದ್ದು, ಬಂಗ್ಲೆಗುಡ್ಡದಲ್ಲಿ ಸಿಕ್ಕ 7 ಅಸ್ಥಿಪಂಜರಗಳನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ.…
ನವದೆಹಲಿ: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ನಿತಿನ್ ನಬಿನ್ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳತ್ತ ಗಮನಹರಿಸಿದ್ದಾರೆ.…
ಕೇಪ್ ಕೆನವೆರೆಲ್: ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 9 ತಿಂಗಳ ಕಾಲ ಸುದೀರ್ಘ ಕಾಲದ ಅನುಭವ ಹೊಂದಿರುವ ಸುನಿತಾ ವಿಲಿಯಮ್ಸ್ ನಿವೃತ್ತರಾಗಿದ್ದಾರೆ.…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ರಾಮನಗರ: ತೆಂಗಿನ ಮರ ಹತ್ತಿ ಕೆಳಗೆ ಬಿದ್ದ ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ…