ಮೈಸೂರು

ಪಿಎಚ್‌.ಡಿ ಮಾರ್ಗದರ್ಶನಕರ ಕೊರತೆ ; ಮೈಸೂರು ವಿವಿ ವಿರುದ್ಧ ಅಹೋರಾತ್ರಿ ಧರಣಿ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿಎಚ್‌.ಡಿ ನಡೆಸಲು ಸಂಶೋಧನಾ ಮಾರ್ಗದರ್ಶಕರ ಕೊರತೆ ಇರುವುದನ್ನು ನೀಗಿಸಿ ಹೆಚ್ಚುವರಿ ಪಿಎಚ್.ಡಿ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘ ಮತ್ತು ಪಿಎಚ್.ಡಿ ಆಕಾಂಕ್ಷಿಗಳು ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.

ನಗರದ ಕಾಫ್ರಡ್ ಭವನ ಮುಂಭಾಗ ಮಂಗಳವಾರ ಬೆಳಗಿನಿಂದಲೇ ಆರಂಭವಾದ ಪ್ರತಿಭಟನೆಗೆ ಸಂಶೋಧನ ವಿದ್ಯಾರ್ಥಿಗಳು, ಪಿಎಚ್.ಡಿ ಆಕಾಂಕ್ಷಿಗಳು ಜಮಾವಣೆಗೊಂಡ ವಿವಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರು ವಿವಿಯಲ್ಲಿ ಪಿಎಚ್.ಡಿ ಮಾರ್ಗದರ್ಶಕ ಕೊರತೆ ಹೇರಳವಾಗಿದೆ. ಇದರಿಂದ ಹೊಸದಾಗಿ ಪಿಎಚ್.ಡಿ. ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗೆ ತೊಡಕಾಗಿ ವಿದ್ಯಾರ್ಥಿಗಳ ಬದುಕು ಸಂಕಷ್ಟಕ್ಕೆ ಸಿಲುಕಿದೆ ಎಂದು ದೂರಿದರು.

ಪ್ರಾಧ್ಯಾಪಕರ ಕೊರತೆ ;
ಪಿಎಚ್.ಡಿ., ಕೆ-ಸೆಟ್, ನೆಟ್, ಜೆಆರ್‌ಎಫ್ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ವಿವಿಯಲ್ಲಿ ಪಿಎಚ್.ಡಿ. ಅಧ್ಯಯನಕ್ಕೆ ಅವಕಾಶ ಇಲ್ಲದಂತಾಗಿದೆ. ಆದ್ದರಿಂದ ಈಗಿರುವ ಖಾಯಂ ಪ್ರಾಧ್ಯಾಪಕರ ಬಳಿಯೇ ಮಾರ್ಗದರ್ಶನ ಪಡೆಯಲು ಅವಕಾಶ ಕೊಡಬೇಕು. ಪಿಎಚ್.ಡಿ. ಅಭ್ಯರ್ಥಿಗಳ ಹಿತದೃಷ್ಟಿಯಿಂದ ಮಾರ್ಗದರ್ಶಕರಿಗೆ ನಿಗದಿಪಡಿಸಿರುವ ವಿದ್ಯಾರ್ಥಿಗಳ ಸಂಖ್ಯೆಯ ಮಿತಿಯನ್ನು ಹೆಚ್ಚಿಸಬೇಕು ಎಂದು ಪ್ರತಿಭಟನಾಕರರು ಆಗ್ರಹಿಸಿದರು.

ಸಂಶೋಧನಾ ಆಕಾಂಕ್ಷಿಗಳ ಬೇಡಿಕೆಗಳು ;
ಪಿಎಚ್.ಡಿ. ಮಾರ್ಗದರ್ಶನಕ್ಕೆ ಹೆಚ್ಚುವರಿ ದಾಖಲಾತಿ ಕೊಡಬೇಕು. ವಿಶ್ವವಿದ್ಯಾನಿಲಯದ ಎಲ್ಲಾ ವಿಭಾಗಗಳಲ್ಲೂ ಪಿಎಚ್.ಡಿ. ಮಾರ್ಗದರ್ಶಕರ ಕೊರತೆ ಇದೆ. ಹಾಗಾಗಿ ಕೇಂದ್ರದ ಯುಜಿಸಿ ಮಾರ್ಗಸೂಚಿಯ ಪ್ರಕಾರ ಇತರೆ ವಿವಿಗಳ ಸಾಮಾಜಿಕ ಅಧ್ಯಯನ ಒಳಗೊಳ್ಳುವಿಕೆ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರುಗಳಿಗೆ ಹೆಚ್ಚುವರಿ ಅವಕಾಶ ನೀಡಿದ್ದು, ಇಲ್ಲಿಯೂ ಆ ಮಾದರಿಯನ್ನು ಅನುಸರಿಸಬೇಕು ಎಂದು ಒತ್ತಾಯಿಸಿದರು.

ಇದರಿಂದ ವಿವಿಗೆ ಯಾವುದೇ ಆರ್ಥಿಕ ಹೊಣೆಗಾರಿಕೆ ಇರುವುದಿಲ್ಲ. ಶೈಕ್ಷಣಿಕ ಪ್ರಗತಿಯ ದೃಷ್ಟಿಯಿಂದ ಇತರೆ ಸಹ ಪ್ರಾಧ್ಯಾಪಕರಿಗೂ ಪಿಎಚ್.ಡಿ.ಗೆ ಮಾರ್ಗದರ್ಶನ ನೀಡಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಮಳೆಯನ್ನು ಲೆಕ್ಕಸದೇ ಧರಣಿ;
ಮಂಗಳವಾರ ಬೆಳಿಗ್ಗೆ 11ರ ವೇಳೆಯಿಂದ ಆರಂಭವಾದ ಪ್ರತಿಭಟನೆಗೆ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸದ ಕಾರಣ ದಲಿತ ಸಂಘರ್ಷ ಸಮಿತಿಯ ಸಂಚಾಲಕ ಚೋರನಹಳ್ಳಿ ಶಿವಣ್ಣ ಅವರ ನೇತೃತ್ವದಲ್ಲಿ ಆಹೋರಾತ್ರಿ ಧರಣಿ ನಡೆಯುತ್ತಿದೆ. ಮಳೆಯನ್ನು ಲೆಕ್ಕಸದೇ ಹೋರಾಟಗಾರರು ಧರಣಿ ಮುಂದುವರಿಸಿದ್ದಾರೆ.

ಮಾಜಿ ಮಹಾಪೌರ ಪುರುಷೋತ್ತಮ್, ಸಂಶೋಧಕರ ಸಂಘದ ಅಧ್ಯಕ್ಷ ಶಿವಶಂಕರ್, ವಿಶ್ವ ಪ್ರಸಾದ್, ಉಪಾಧ್ಯಕ್ಷ ಪಿ.ಮರಹಳ್ಳಿ, ಪ್ರದೀಪ್, ಮಹೇಶ್, ರೋಹನ್, ರೋಜಾ ಸೇರಿದಂತೆ ಸಂಶೋಧನಾ ಆಕಾಂಕ್ಷಿಗಳು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

9 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

14 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

15 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

16 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

16 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

22 hours ago