Categories: ಮೈಸೂರು

ಮೈಸೂರು: ಜಿಲ್ಲಾ ಮಟ್ಟದ ಯುವಜನೋತ್ಸವ; ವಿವಿಧ ಸ್ಪರ್ಧೆಗಳ ಆಯೋಜನೆ

ಮೈಸೂರು: ಜಿಲ್ಲಾ  ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಅಂಗವಾಗಿ ಡಿಸೆಂಬರ್‌ 4 ರಂದು ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೆಂದ್ರ, ಮೈಸೂರು ರಾಷ್ಟ್ರೀಯ ಸೇವಾ ಯೋಜನೆ, ಮೈಸೂರು ವಿಶ್ವವಿದ್ಯಾನಿಲಯ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು  ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಮೈಸೂರು ಇವರುಗಳ ಸಹಯೋಗದಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಆಸಕ್ತರು ಡಿಸೆಂಬರ್ 04 ರಂದು ಬೆಳಿಗ್ಗೆ 9 ಗಂಟೆಗೆ ಚಾಮುಂಡಿ ವಿಹಾರ ಕ್ರೀಡಾಂಗಣದ ಸಂಘಟಿಕರಲ್ಲಿ ವರದಿ ಮಾಡಿಕೊಳ್ಳಬೇಕು.

ವಿಷಯಾಧಾರಿತ ಸ್ಪರ್ಧೆಗಳು ಇಂತಿವೆ:  ವಿಜ್ಞಾನ ಮೇಳ,  ಕನ್ನಡ/ಆಂಗ್ಲ/ಹಿoದಿ ಭಾಷೆಯಲ್ಲಿ ಜಾನಪದ ನೃತ್ಯ (ತಂಡ), ಜಾನಪದ ಗೀತೆ (ತಂಡ), ಜಾನಪದ ನೃತ್ಯ (ವೈಯಕ್ತಿಕ), ಜಾನಪದ ಗೀತೆ (ವೈಯಕ್ತಿಕ), ಕವಿತೆ ಬರೆಯುವುದು (Poetry) (ವೈಯಕ್ತಿಕ) (1000 ಪದಗಳಿಗೆ ಮೀರದಂತೆ) ಕಥೆ ಬರೆಯುವುದು (Story Wirting) (1000 ಪದಗಳಿಗೆ ಮೀರದಂತೆ), ಚಿತ್ರಕಲೆ (Painting) A3 Size I.e 11.7”x16.5”, Declamation (ಘೋಷಣೆ)  ಹಿಂದಿ ಮತ್ತು ಆಂಗ್ಲ ಭಾಷೆಯಲ್ಲಿರಬೇಕು. (ರಾಷ್ಟಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು) ಕನ್ನಡ ಭಾಷೆಯನ್ನು ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮದವರೆಗೆ ಮಾತ್ರ ಸೀಮಿತಗೊಳಿಸಿದೆ. ಸ್ಪರ್ಧಿಗಳು ಸಿದ್ಧಪಡಿಸಿಕೊಂಡಿರುವ ಆಯ್ಕೆ ವಿಷಯಗಳ ಬಗ್ಗೆ 3 ನಿಮಿಷಗಳ ಭಾಷಣ ಮಾಡಬೇಕು. ಗುಡಿ ಕೈಗಾರಿಕೆಯ ಕಲಾ ಪ್ರಕಾರ (Artisans of Handcrafts to Participate in Yuva Kirthi), ನೇಕಾರಿಕೆ/ಜವಳಿ (Textile), ಕೃಷಿ ಉತ್ಪನ್ನಗಳು (Agro Products) ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

ಸ್ಪರ್ಧೆಗಳಿಗೆ 15 ರಿಂದ 29 ವರ್ಷದೊಳಗಿನ ಯುವಕ/ಯುವತಿಯರು, ಶಾಲಾ/ಕಾಲೇಜುಗಳ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಮತ್ತು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ನೊಂದಾವಣೆಯಾದ ಯುವಕ ಸಂಘಗಳು, ಯುವತಿ ಮಂಡಳಿಗಳ ಪದಾಧಿಕಾರಿಗಳು ಭಾಗವಹಿಸಬಹುದಾಗಿದೆ.

ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದವರು 2024-25 ನೇ ಸಾಲಿನ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ. ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾದ ಸ್ಪರ್ಧಾಳುಗಳಿಗೆ ನಗದು ಬಹುಮಾನ, ಪ್ರಶಸ್ತಿ ಪತ್ರ ಮತ್ತು ಫಲಕಗಳನ್ನು ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ದೂ.ಸಂ: 0821-2564179 ಅನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಬಾಸ್ಕರ್ ನಾಯಕ್  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

3 hours ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

3 hours ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

8 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

8 hours ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

8 hours ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

8 hours ago