Mysore
23
clear sky

Social Media

ಭಾನುವಾರ, 12 ಏಪ್ರಿಲ 2026
Light
Dark

ಮೈಸೂರು: ಜಿಲ್ಲೆಯ ವಿವಿಧ ಜಲಮೂಲ, ನೀರಿನ ಸ್ಥಾವರಗಳನ್ನು ಪರಿಶೀಲಿಸಿದ ಜಿಪಂ ಸಿಇಒ

ಮೈಸೂರು: ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಯುವಕನೋರ್ವ ಸಾವನ್ನಪ್ಪಿದ್ದು, ಸುಮಾರು 40ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಬೆನ್ನಲ್ಲೇ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಎಂ ಗಾಯತ್ರಿ ಅವರು ಹಲವು ಗ್ರಾಮಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಸ್ಥಾವರಗಳು ಹಾಗೂ ಜಲಮೂಲಗಳನ್ನು ಪರಿಶೀಲನೆ ನಡೆಸಿದರು.

ಯಡಕೊಳ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಕುಡಿಯುವ ನೀರಿನ ಸ್ಥಾವರಗಳು ಹಾಗೂ ಜಲಮೂಲಗಳನ್ನು ಪರಿಶೀಲಿಸಿದರು. ಬಳಿಕ ಅಲ್ಲಿಂದ ಕೀಳನಪುರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಕುಡಿಯುವ ನೀರಿನ ಸ್ಥಾವರಗಳ ಪರಿಶೀಲನೆ ಹಾಗೂ ವರುಣ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ನೀರಿನ ಗುಣಮಟ್ಟ ಹಾಗೂ ವಿವಿಧ ಜಲಮೂಲಗಳ ಪರಿಶೀಲನೆಗಳ ನಡೆಸಿದರು. ಇವರಿಗೆ ಅಧಿಕಾರಿಗಳು ಸಾಥ್‌ ನೀಡಿದರು.

Tags:
error: Content is protected !!