ಮೈಸೂರು: ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಯುವಕನೋರ್ವ ಸಾವನ್ನಪ್ಪಿದ್ದು, ಸುಮಾರು 40ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಬೆನ್ನಲ್ಲೇ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಎಂ ಗಾಯತ್ರಿ ಅವರು ಹಲವು ಗ್ರಾಮಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಸ್ಥಾವರಗಳು ಹಾಗೂ ಜಲಮೂಲಗಳನ್ನು ಪರಿಶೀಲನೆ ನಡೆಸಿದರು.
ಯಡಕೊಳ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಕುಡಿಯುವ ನೀರಿನ ಸ್ಥಾವರಗಳು ಹಾಗೂ ಜಲಮೂಲಗಳನ್ನು ಪರಿಶೀಲಿಸಿದರು. ಬಳಿಕ ಅಲ್ಲಿಂದ ಕೀಳನಪುರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಕುಡಿಯುವ ನೀರಿನ ಸ್ಥಾವರಗಳ ಪರಿಶೀಲನೆ ಹಾಗೂ ವರುಣ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ನೀರಿನ ಗುಣಮಟ್ಟ ಹಾಗೂ ವಿವಿಧ ಜಲಮೂಲಗಳ ಪರಿಶೀಲನೆಗಳ ನಡೆಸಿದರು. ಇವರಿಗೆ ಅಧಿಕಾರಿಗಳು ಸಾಥ್ ನೀಡಿದರು.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…