ನಾಗಮಂಗಲ: ನಾಗಮಂಗಲ ಪಟ್ಟಣದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಸಂಭವಿಸಿದ್ದ ಗಲಭೆಯಿಂದ ಉಂಟಾಗಿದ್ದ ಉದ್ವಿಗ್ನ ವಾತಾವರಣ ತಿಳಿಗೊಂಡಿದೆ.
ಘಟನೆ ನಡೆದ ದಿನದಿಂದಲೂ ಬಂದ್ ಆಗಿದ್ದ ಅಂಗಡಿಗಳು ನಿನ್ನೆ ಶೇಕಡಾ.50ರಷ್ಟು ತೆರೆದಿವೆ.
ಆತಂಕದ ಕಾರ್ಮೋಡದ ನಡುವೆಯೂ ವ್ಯಾಪಾರಿಗಳು ವಹಿವಾಟು ನಡೆಸಿದ್ದು, ದಿನಸಿ, ಬೇಕರಿ, ಹಾಲು, ಹಣ್ಣು-ಹೂವು, ಮೊಬೈಲ್ ಅಂಗಡಿಗಳು ಸೇರಿದಂತೆ ವಿವಿಧ ವಾಣಿಜ್ಯ ಮಳಿಗೆಗಳು ತೆರೆದಿವೆ.
ಎಲ್ಲಾ ಆತಂಕಗಳನ್ನು ಬಿಟ್ಟು ಜನರು ಅಗತ್ಯ ವಸ್ತುಗಳನ್ನು ಕೊಳ್ಳಲು ಮನೆಯಿಂದ ಹೊರ ಬಂದಿದ್ದಾರೆ.
ಇನ್ನು ತರಗತಿಗಳು ಕೂಡ ಓಪನ್ ಆಗಿದ್ದು, ಕೆಎಸ್‌ಆರ್‌ಟಿಸಿ ಬಸ್‌ಗಳು ಕೂಡ ಸಂಚಾರ ಮಾಡಿವೆ.
ಇನ್ನು ಸಾರ್ವಜನಿಕರ ಆತಂಕ ನಿವಾರಣೆ ಮಾಡಲು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರ ನೇತೃತ್ವದಲ್ಲಿ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ನಡೆದಿದೆ.
ಈ ಹಿನ್ನೆಲೆಯಲ್ಲಿ ನಾಗಮಂಗಲ ಪಟ್ಟಣದಲ್ಲಿ ಜನಜೀವನ ಎಂದಿನಂತೆ ಇದ್ದು, ಆತಂಕದಿಂದ ಜನತೆ ಹೊರ ಬಂದಿದ್ದಾರೆ ಎನ್ನಲಾಗಿದೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…