Mysore
31
few clouds

Social Media

ಗುರುವಾರ, 19 ಫೆಬ್ರವರಿ 2026
Light
Dark

ನಾಳೆಯಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ ಪುನರಾರಂಭ

ಮೈಸೂರು : ನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನಗಳಲ್ಲಿ ಫೆಬ್ರವರಿ 19ರಿಂದ ಸಫಾರಿ ಪುನರಾರಂಭವಾಗಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಘೋಷಿಸಿದ್ದಾರೆ.

ಹುಲಿ-ಚಿರತೆ ದಾಳಿಗಳ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಸಫಾರಿಯನ್ನು 50% ಸಾಮರ್ಥ್ಯದಲ್ಲಿ ಮತ್ತು ಕಡಿಮೆ ಅವಧಿಯಲ್ಲಿ ಮರುಪ್ರಾರಂಭಿಸಲು ನಿರ್ಧರಿಸಲಾಗಿದೆ. ತಾಂತ್ರಿಕ ಸಮಿತಿಯ ಮಧ್ಯಂತರ ವರದಿಯ ಆಧಾರದ ಮೇಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪೂರ್ಣ ವರದಿ ಬಂದ ಬಳಿಕ ಸಂಪೂರ್ಣ ಅನುಮತಿ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅರಣ್ಯ ಸಚಿವರು ಮಾಹಿತಿ ನೀಡಿದ್ದಾರೆ

ಸಫಾರಿ ಸಮಯಾವಧಿ (ಮೊದಲ ಹಂತ):
– ಬಂಡೀಪುರ : ಬೆಳಗ್ಗೆ 8 ರಿಂದ ಸಂಜೆ 5ರವರೆಗೆ
– ಸುಂಕದಕಟ್ಟೆ: 6 ಗಂಟೆ ಅವಧಿ
– ನಾಗರಹೊಳೆ : 4 ಗಂಟೆ ಅವಧಿ ಮಾತ್ರ

ನಿಯಮಗಳು :
– ರೆಸಾರ್ಟ್‌ ಮತ್ತು ಹೋಂಸ್ಟೇಗಳಲ್ಲಿ ಕ್ಯಾಂಪ್ ಫೈರ್ ನಿಷೇಧ
– 50% ವಾಹನಗಳ ಬಳಕೆ ಮಾತ್ರ

ಅರಣ್ಯ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಬುಕ್ಕಿಂಗ್ ತೆರೆದಿದೆ. ಶೀಘ್ರವಾಗಿ ಬುಕ್ ಮಾಡಿಬಹುದಾಗಿದೆ.

ಸಫಾರಿ ಪುನರಾರಂಭಕ್ಕೆ ವಿರೋಧ
ಬಂಡೀಪುರ ಸಫಾರಿಗೆ ಗ್ರೀನ್ ಸಿಗ್ನಲ್ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ದ ಗಡಿನಾಡ ರೈತರು ನಾಳೆ ಬಂಡೀಪುರ ಅರಣ್ಯ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದ್ದಾರೆ.

ಹುಲಿ ಹಾಗೂ ಚಿರತೆ ದಾಳಿಯಿಂದ ರಾಜ್ಯದ ಹಲವೆಡೆ ಸಾವು ನೋವುಗಳು ಹೆಚ್ಚಾದ ಹಿನ್ನೆಲೆ ಸರ್ಕಾರ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿತ್ತು. ಇದರ ಪರಿಣಾಮವಾಗಿ ಕೇರಳ ಮತ್ತು ತಮಿಳುನಾಡು ರಾಜ್ಯಗಳಿಗೆ ಲಾಭವಾಗಿದೆ. ರಣಥಂಬೋರ್ ಹಾಗೂ ಕಾರ್ಬೆಟ್ ಸೇರಿದಂತೆ ಇತರ ರಾಜ್ಯಗಳ ಉದ್ಯಾನವನಗಳಲ್ಲಿ ಸಫಾರಿ ಬುಕ್ಕಿಂಗ್ ಹೆಚ್ಚಾಗಿದೆ ಎಂದು ಕರ್ನಾಟಕ ಇಕೋ-ಟೂರಿಸಂ ರೆಸಾರ್ಟ್ಸ್ ಅಸೋಸಿಯೇಶನ್ (KETRA) ದೂರಿತ್ತು. ಅಲ್ಲದೆ ಬಂಡೀಪುರ-ನಾಗರಹೊಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 35 ರಿಸಾರ್ಟ್ಗಗಳಿಗೆ ದಿನಕ್ಕೆ ಸರಾಸರಿ 3 ಕೋಟಿ ರೂಪಾಯಿ ನಷ್ಟವಾಗುತ್ತಿದೆ. ಸುಮಾರು 8,000 ಜನರು ಪರಿಸರ ಪ್ರವಾಸೋದ್ಯಮದ ಮೇಲೆ ಅವಲಂಬಿತರಾಗಿದ್ದು, ಸಫಾರಿಗೆ ಬ್ರೇಕ್ ಬಿದ್ದಿರುವುದು ಇವರ ಜೀವನದ ಮೇಲೆ ಪರಿಣಾಮ ಬಿದ್ದಿದೆ ಎಂಬ ಬಗ್ಗೆ ವರದಿಯಾಗಿತ್ತು.

 

 

Tags:
error: Content is protected !!