ಮೈಸೂರು

ನಾಗರಹೊಳೆ: ಕಾಡಾನೆ ದಾಳಿಗೆ ಅರಣ್ಯ ವೀಕ್ಷಕ ಸಾವು

ಮೈಸೂರು: ನಾಗರಹೊಳೆ ಅರಣ್ಯ ವ್ಯಾಪ್ತಿಯ ಮೇಟಿಕುಪ್ಪೆ ವಲಯದಲ್ಲಿ ಶನಿವಾರ ತಡರಾತ್ರಿ ಕಾಡಾನೆ ದಾಳಿಗೆ ಸಿಲುಕಿ ಮಹದೇವಸ್ವಾಮಿ ಎಂಬ ಅರಣ್ಯ ವೀಕ್ಷಕ (ದಿನಗೂಲಿ ನೌಕರ) ಸಾವನ್ನಪ್ಪಿದ್ದಾರೆ.

ನಾಗರಹೊಳೆ ಅರಣ್ಯ ವ್ಯಾಪ್ತಿಯ ಮೇಟಿಕುಪ್ಪೆ ವಲದ ವ್ಯಾಪ್ತಿಯಲ್ಲಿ ಕಳೆದ ಕೆಲದಿನಗಳಿಂದ ಕಾಡಾನೆ ಹಾವಳಿ ಇದ್ದ ಭಾಗದಲ್ಲಿ ಆನೆಯನ್ನು ಕಾಡಿಗೆ ಹಿಮ್ಮೆಟ್ಟಿಸಲಾಗುತ್ತು. ಅದರಂತೆ ಡಿ.31ರ ತಡರಾತ್ರಿ ಆನೆಯನ್ನು ಹಿಮ್ಮೆಟ್ಟಿಸುವ ವೇಳೆ ಏಕಾಏಕಿ ದಾಳಿ ನಡೆಸಿದ ಕಾಡಾನೆ ಮಹದೇವಸ್ವಾಮಿ ಎಂಬ ವೀಕ್ಷಕನನ್ನು ಬಲಿ ಪಡೆದುಕೊಂಡಿದೆ. ದಾಳಿಯ ತೀವ್ರತೆಗೆ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತ ದೇಹವನ್ನು ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

ಶುಕ್ರವಾರವಷ್ಟೇ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಚಿಕ್ಕ ಬೀಚನಹಳ್ಳಿಯ ಬಳಿ ಕಾಡಾನೆ ದಾಳಿಗೆ ರೈ ಮಹಿಳೆಯೊಬರು ಬಲಿಯಾಗಿದ್ದರು. ಒಂದು ದಿನದ ಅಂತರದಲ್ಲಿ ಇಬ್ಬರು ಕಾಡಾನೆ ದಾಳಿಗೆ ಬಲಿಯಾದಂತಾಗಿದೆ.

andolana

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

2 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

2 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

3 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

5 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

6 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

6 hours ago