ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಕಾಡು ಪ್ರಾಣಿ ಬೇಟೆಯಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಅರಣ್ಯಾಧಿಕಾರಿಗಳು ಕೃತ್ಯಕ್ಕೆ ಬಳಸಿದ್ದ ಕಾರು, ಪರಿಕರ ಹಾಗೂ ಪ್ರಾಣಿ ಮಾಂಸ, ಚರ್ಮ ವಶಕ್ಕೆ ಪಡೆದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಸೂಳಗೋಡು ಗ್ರಾಮದ ಲೇ.ಚಂಗಪ್ಪರ ಪುತ್ರ ಮೋಕ್ಷಿತ್ ಬಂಧಿತ ಆರೋಪಿ. ಉಳಿದ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ.
ಘಟನೆ ವಿವರ: ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಆನೆಚೌಕೂರು ವನ್ಯಜೀವಿ ವಲಯದ ದೇವಮಚ್ಚಿ ಶಾಖೆಯ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದ್ದು, ಶನಿವಾರ ಬೆಳಗ್ಗೆ ಗಸ್ತಿನಲ್ಲಿದ್ದ ವೇಳೆ ಬಂದ ಖಚಿತ ಮಾಹಿತಿ ಮೇರೆಗೆ ಅಕ್ರಮವಾಗಿ ಅರಣ್ಯ ಪ್ರವೇಶಿಸಿದ್ದ ಆರೋಪಿಯನ್ನು ಬಂಧಿಸಿ, ಸುಮಾರು 12 ಕೆ.ಜಿ ಕಾಡು ಪ್ರಾಣಿ ಮಾಂಸ, ಜಿಂಕೆ ಚರ್ಮ ಹಾಗೂ ಕೃತ್ಯಕ್ಕೆ ಬಳಸಿದ್ದ ಪರಿಕರಗಳನ್ನು ವಶಕ್ಕೆ ಪಡೆದರು. ಆರೋಪಿಯು ಪಕ್ಕದ ಹಾಡಿ ಬಳಿ ನಿಲ್ಲಿಸಿದ್ದ ಆತನ ಮಾರುತಿ-800 ಕಾರನ್ನು ವಶಕ್ಕೆ ಪಡೆಯಲಾಗಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ಕ್ರಮವಹಿಸಲಾಗಿದೆ ಎಂದು ಡಿಸಿಎಫ್ ಹರ್ಷಕುಮಾರ್ ಚಿಕ್ಕನರಗುಂದ ತಿಳಿಸಿದ್ದಾರೆ.
ಕಾರ್ಯಾಚರಣೆಯು ಡಿಸಿಎಫ್ ಮತ್ತು ಎಸಿಎಫ್ ದಯಾನಂದ್ ಡಿ.ಎಸ್. ಮಾರ್ಗದರ್ಶನದಲ್ಲಿ ಆರ್.ಎಫ್.ಓ.ದಿಲೀಪ್‌ಕುಮಾರ್.ಪಿ.ಸಿ, ಡಿ.ಆರ್.ಎಫ್.ಓಗಳಾದ ಎಂ.ಸಿದ್ದಪ್ಪಾಜಿ, ವಿನೋದ್‌ಕುಮಾರ್, ಅರಣ್ಯ ರಕ್ಷಕ ನಿತಿನ್‌ನಾಯ್ಕ, ಅರಣ್ಯ ವೀಕ್ಷಕ ಶಿವಕುಮಾರ್, ಸಿಬ್ಬಂದಿಗಳು ಭಾಗವಹಿಸಿದ್ದರು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…