ಮೈಸೂರು

ರೈಲ್ವೆ ಮೆಲ್ಸೇತುವೆಗೆ ಶ್ರೀನಿವಾಸ್ ಪ್ರಸಾದ್ ಹೆಸರಿನ ನಾಮಫಲಕ ಅನಾವರಣ‌

ನಂಜನಗೂಡು: ಅಭಿಮಾನಿಗಳ ಹರ್ಷೊಧ್ಘಾರದ ನಡುವೆ ರೈಲ್ವೆ ಮೆಲ್ಸೇತುವೆಗೆ ಶ್ರೀನಿವಾಸ್ ಪ್ರಸಾದ್ ಹೆಸರಿನ ನಾಮಫಲಕ ಅನಾವರಣಗೊಂಡಿದೆ.

ಮೈಸೂರು-ನಂಜನಗೂಡು ಹೆದ್ದಾರಿಯಲ್ಲಿ ನಿರ್ಮಾಣವಾಗಿರುವ ರೈಲ್ವೆ ಮೇಲ್ಸೇತುವೆಗೆ ಮಾಜಿ ಸಂಸದರಾದ ದಿವಂಗತ ವಿ.ಶ್ರೀನಿವಾಸ್‌ ಪ್ರಸಾದ್‌ ಹೆಸರಿನ ನಾಮಫಲಕವನ್ನು ಶಾಸಕ ದರ್ಶನ್‌ ಧ್ರುವನಾರಾಯಣ್‌ ಹಾಗೂ ಪ್ರಸಾದ್‌ ಪುತ್ರಿ ಪ್ರತಿಮಾ ಪ್ರಸಾದ್‌ ಅವರು ಅನಾವರಣಗೊಳಿಸಿದರು.

ಈ ವೇಳೆ ಅಭಿಮಾನಿಗಳು ಹರ್ಷೋದ್ಘಾರದ ಝೇಂಕಾರ ಹೊರಡಿಸಿದರು. ಈ ವೇಳೆ ಮಾತನಾಡಿದ ಶಾಸಕ ದರ್ಶನ್‌ ಧ್ರುವನಾರಾಯಣ್‌ ಅವರು, ನಮ್ಮ ತಂದೆ ಹಾಗೂ ಮಾಜಿ ಸಂಸದ ಆರ್.ಧ್ರುವನಾರಾಯಣ್‌ ಅವರ ಜನ್ಮ ದಿನೋತ್ಸವದಂದೇ ಧೀಮಂತ ನಾಯಕ, ಕೇಂದ್ರ ಹಾಗೂ ರಾಜ್ಯದ ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಹೆಸರನ್ನು ಶಾಶ್ವತವಾಗಿಸುವ ಭಾಗ್ಯ ನನ್ನದಾಗಿದೆ. ಇದು ಅತ್ಯಂತ ಖುಷಿಯ ವಿಚಾರ ಎಂದು ಸಂತಸ ವ್ಯಕ್ಪಪಡಿಸಿದರು.

ಬಳಿಕ ಮಾತನಾಡಿದ ವಿ.ಶ್ರೀನಿವಾಸ್ ಪ್ರಸಾದ್‌ ಪುತ್ರಿ ಪ್ರತಿಮಾ ಪ್ರಸಾದ್‌ ಅವರು, ಶ್ರೀನಿವಾಸ್‌ ಪ್ರಸಾದ್‌ ಹಾಗೂ ಧ್ರುವನಾರಾಯಣ್ ಅಭಿಮಾನಿಗಳ ಸಮ್ಮುಖದಲ್ಲಿ ಈ ನಾಮಫಲಕ ಅನಾವರಣವಾಗಿದ್ದು, ನಮ್ಮಲ್ಲಿನ ಸಾಮರಸ್ಯದ ದ್ಯೊತಕವಾಗಿದೆ. ಈ ಸಂತಸ ಮುಂದುವರಿಯಬೇಕು ಎಂದರು. ಈ ನಾಮಫಲಕ ಅನಾವರಣಕ್ಕಾಗಿ ಸಮ್ಮತಿಸಿದ ದರ್ಶನ್ ಧ್ರುವನಾರಾಯಣ್ ಅವರನ್ನು ಅಭಿನಂದಿಸಿದ ಪ್ರತಿಮಾ ಪ್ರಸಾದ್‌ ಅವರು, ನಗರಸಭೆಯ ಈ ಕಾರ್ಯ ಶ್ಲಾಘನೀಯ ಎಂದು ಸಂತಸ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

3 hours ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

3 hours ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

3 hours ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

3 hours ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

3 hours ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

3 hours ago