ಮೈಸೂರು

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.

ನಂಜನಗೂಡು ತಾಲ್ಲೂಕಿನ ದೇವಿರಮ್ಮನಹಳ್ಳಿ, ದೇವರಸನಹಳ್ಳಿ, ಕೆಬ್ಬೇಪುರ, ನವಿಲೂರು, ಮಸಗೆ ಗ್ರಾಮಗಳಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ದೇವರಸನಹಳ್ಳಿ ಗ್ರಾಮದಲ್ಲಿ ಚುನಾವಣೆಯ ಸಂದರ್ಭದಲ್ಲಿ ಗ್ರಾಮಸ್ಥರು ರಸ್ತೆಯನ್ನು ಅಭಿವೃದ್ಧಿಪಡಿಸುವಂತೆ ಕೇಳಿಕೊಂಡಿದ್ದರು. ನಾನು ಕೂಡ ರಸ್ತೆಯನ್ನು ಅಭಿವೃದ್ಧಿಪಡಿಸುತ್ತೇನೆ ಎಂದು ಮಾತು ಕೊಟ್ಟಿದ್ದೆ. ಕೊಟ್ಟ ಮಾತಿನಂತೆ ನಡೆದುಕೊಂಡು ಹಳ್ಳದ ಕೇರಿಯಿಂದ ದೇವರಸನಹಳ್ಳಿ ಮಾರ್ಗವಾಗಿ ಉಪ್ಪನಹಳ್ಳಿ ಗ್ರಾಮದ ತನಕ ರಸ್ತೆ ಅಭಿವೃದ್ಧಿ ಪಡಿಸುತ್ತಿದ್ದೇವೆ. ಯುದ್ಧ ನಡೆಯುತ್ತಿರುವುದರಿಂದ ಕಾಮಗಾರಿ ವಿಳಂಬವಾಗುತ್ತಿದೆ. ಆದಷ್ಟು ಬೇಗ ಕಾಮಗಾರಿಯನ್ನು ಪೂರ್ಣಗೊಳಿಸಲಾಗುತ್ತದೆ. ಸಮುದಾಯ ಭವನ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತದೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳ ಜೊತೆ ಜೊತೆಗೆ ಅಭಿವೃದ್ಧಿಗೂ ಹೆಚ್ಚಿನ ಒತ್ತು ನೀಡಿ, ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನವನ್ನು ಬಿಡುಗಡೆ ಮಾಡುತ್ತಿದೆ. ಒಂದೇ ದಿನದಲ್ಲಿ 6.2 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದ್ದೇನೆ. ಕಳೆದ ನಾಲ್ಕು ದಿನಗಳಿಂದ ಸುಮಾರು 9.2 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ್ದೇನೆ. ಕ್ಷೇತ್ರದ ಜನರು ನನಗೆ ಮತ್ತಷ್ಟು ಸಮಯವನ್ನು ನೀಡಿದರೆ ಹಂತ ಹಂತವಾಗಿ ಗ್ರಾಮಗಳನ್ನು ಅಭಿವೃದ್ಧಿಪಡಿಸುತ್ತೇವೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ಎಸ್ಸಿ ಬ್ಲಾಕ್ ಅಧ್ಯಕ್ಷ ಉಪ್ಪಿನಹಳ್ಳಿ ಶಿವಣ್ಣ, ಮುಖಂಡರಾದ ನಾರಾಯಣ ಗೌಡ, ಚಲುವಪ್ಪ, ತಮ್ಮಯ್ಯ, ರಾಜು, ರವಿಕುಮಾರ್, ದೇವರಸನಹಳ್ಳಿ ರಘು, ಕಳಲೆ ರಾಜೇಶ್, ದೇಬೂರು ಅಶೋಕ್, ಸುರೇಶ್, ರಾಜು, ಮಂಜು, ನಂಜಪ್ಪ, ಮುದ್ದು ಮಾದಶೆಟ್ಟಿ ಸೇರಿದಂತೆ ಹಲವರು ಹಾಜರಿದ್ದರು.

 

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

13 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

16 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

17 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

17 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

17 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

17 hours ago