ಮೈಸೂರು

ನಂ.ಗೂಡು | ತಾಯಿಯಿಂದ ಬೇರ್ಪಟಿದ್ದ ಹುಲಿ ಮರಿ ಸೆರೆ

ನಂಜನಗೂಡು : ತಾಯಿ ಹುಲಿಯಿಂದ ಬೇರ್ಪಡೆಯಾಗಿದ್ದ ಒಂದುವರೆ ವರ್ಷದ ಮರಿ ಹುಲಿ ಸೆರೆಯಾಗಿದೆ.  ತಾಲೂಕಿನ ಹೊಸ ವೀಡು ಗ್ರಾಮದ ಸೋಮೇಶ್ ಎಂಬುವರ ಜಮೀನಿನ ಬಳಿ ಸೆರೆಯಾಗಿದೆ.
ಕಳೆದ ವಾರ ಈರೇಗೌಡನ ಹುಂಡಿ ಗ್ರಾಮದ ಬಳಿ ತಾಯಿ ಹುಲಿಯನ್ನು ಸೆರೆ ಹಿಡಿಯಲಾಗಿತ್ತು. ಎರಡು ಮರಿ ಹುಲಿಗಳ ಜೊತೆ ಬಾರಿ ಗಾತ್ರದ ತಾಯಿ ಹುಲಿ ಹಿರೇಗೌಡನ ಹುಂಡಿ ಸುತ್ತಮುತ್ತ ಕಾಣಿಸಿಕೊಂಡು ಗ್ರಾಮಸ್ಥರ ನಿದ್ರೆಗೆಡಿಸಿತ್ತು.
ಕೃಷಿ ಜಮೀನುಗಳಿಗೆ ರೈತರು ತೆರಳಲು ಆತಂಕ ವ್ಯಕ್ತಪಡಿಸುತ್ತಿದ್ದರು. ನಂಜನಗೂಡಿನ ಶಾಸಕ ದರ್ಶನ್ ಧ್ರುವನಾರಾಯಣ್ ಕಳೆದ ಎರಡು ದಿನಗಳ ಹಿಂದೆ ಅರಣ್ಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೆರೆ ಹಿಡಿಯುವಂತೆ ಖಡಕ್ ಸೂಚನೆ ನೀಡಿದ್ದರು.
ಅಲರ್ಟ್ ಆದ ಹೆಡಿಯಾಲ ಅರಣ್ಯ ಇಲಾಖೆ ಅಧಿಕಾರಿಗಳು ದಸರಾ ಆನೆಗಳಾದ ಭೀಮ,ಮಹೇಂದ್ರ, ಶ್ರೀಕಂಠ ಮತ್ತು ಲಕ್ಷ್ಮಣ ಆನೆಗಳ ಮೂಲಕ ಕಾರ್ಯಾಚರಣೆ ಆರಂಭಿಸಿದ್ದರು.
ಬಂಡಿಪುರ ರಾಷ್ಟ್ರೀಯ ಉದ್ಯಾನವನದ ಸಿಎಫ್ ಪ್ರಭಾಕರನ್ ಹೆಡಿಯಾಲ ಎಸಿಎಫ್ ಪರಮೇಶ್ ಆರ್‌ಎಫ್ಒ ವಿವೇಕ್ ನೇತೃತ್ವದಲ್ಲಿ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.
ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

2 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

7 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

8 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

9 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

10 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

15 hours ago