ನಂಜನಗೂಡು: ರಸ್ತೆಯ ಹಳ್ಳ ತಪ್ಪಿಸಲು ಹೋಗಿ ಬೈಕ್‌ನಿಂದ ಕೆಳಗೆ ಬಿದ್ದ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಬಳಿ ನಡೆದಿದೆ.
ಹುಲ್ಲಹಳ್ಳಿ ಸಮೀಪದ ಕಂಬದಕೊಲ್ಲಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಶಿರಮಳ್ಳಿ ಗ್ರಾಮದ ನಿವಾಸಿ ಮಾದೇಶ್ ಎಂಬಾತನೇ ಮೃತ ದುರ್ದೈವಿಯಾಗಿದ್ದಾನೆ.
ಇದನ್ನು ಓದಿ: ವಿಶ್ವಸಂಸ್ಥೆ ಹವಾಮಾನ ಶೃಂಗಸಭೆಯಲ್ಲಿ ಬೆಂಕಿ: 21 ಜನರಿಗೆ ಗಂಭೀರ ಗಾಯ
ಮಾದೇಶ್ ಹುಲ್ಲಹಳ್ಳಿಗೆ ಬರುತ್ತಿದ್ದ ವೇಳೆ ಹಳ್ಳವೊಂದು ಏಕಾಏಕಿ ಎದುರಾಗಿದೆ. ಹಳ್ಳ ತಪ್ಪಿಸಲು ಹೋಗಿ ಬೈಕ್ ನಿಯಂತ್ರಣ ಕಳೆದುಕೊಂಡು ಕೆಳಗೆ ಬಿದ್ದಿದ್ದಾರೆ. ತೀವ್ರ ಗಾಯಗೊಂಡಿದ್ದ ನಂದೀಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ಹುಲ್ಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




