ನಂಜನಗೂಡು: ಮನೆ ಬಾಡಿಗೆ ಕೇಳುವ ನೆಪದಲ್ಲಿ ದುಷ್ಕರ್ಮಿಗಳು ವೃದ್ಧೆಯೋರ್ವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡಿನ ದೇವೀರಮ್ಮನಹಳ್ಳಿಯ ಸಾಯಿಬಾಬಾ ದೇವಸ್ಥಾನದ ಬಳಿ ಈ ಘಟನೆ ನಡೆದಿದ್ದು, ದ್ರಾಕ್ಷಾಯಿಣಿ ಎಂಬುವವರೇ ಹಲ್ಲೆಗೊಳಗಾದ ವೃದ್ಧೆಯಾಗಿದ್ದಾರೆ.
ಮನೆ ಬಾಡಿಗೆಗೆ ಬೇಕು ಎಂಬ ನೆಪದಲ್ಲಿ ಮನೆಗೆ ನುಗ್ಗಿದ್ದ ದುಷ್ಕರ್ಮಿಗಳು ದ್ರಾಕ್ಷಾಯಿಣಿ ಅವರಿಗೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾರೆ.
ಹಲ್ಲೆ ಮಾಡಿದ ಬಳಿಕ ಅವರು ಧರಿಸಿದ್ದ ಚಿನ್ನಡ ಒಡವೆಗಳನ್ನು ದೋಚಿ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡಿರುವ ದ್ರಾಕ್ಷಾಯಿಣಿ ಅವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





