ಮೈಸೂರು

ನಂಜನಗೂಡು| ವೃದ್ಧೆಗೆ ಮಾರಣಾಂತಿಕ ಹಲ್ಲೆ: ಚಿನ್ನಾಭರಣ ದೋಚಿ ಪರಾರಿ

ನಂಜನಗೂಡು: ಮನೆ ಬಾಡಿಗೆ ಕೇಳುವ ನೆಪದಲ್ಲಿ ದುಷ್ಕರ್ಮಿಗಳು ವೃದ್ಧೆಯೋರ್ವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.

ನಂಜನಗೂಡಿನ ದೇವೀರಮ್ಮನಹಳ್ಳಿಯ ಸಾಯಿಬಾಬಾ ದೇವಸ್ಥಾನದ ಬಳಿ ಈ ಘಟನೆ ನಡೆದಿದ್ದು, ದ್ರಾಕ್ಷಾಯಿಣಿ ಎಂಬುವವರೇ ಹಲ್ಲೆಗೊಳಗಾದ ವೃದ್ಧೆಯಾಗಿದ್ದಾರೆ.

ಮನೆ ಬಾಡಿಗೆಗೆ ಬೇಕು ಎಂಬ ನೆಪದಲ್ಲಿ ಮನೆಗೆ ನುಗ್ಗಿದ್ದ ದುಷ್ಕರ್ಮಿಗಳು ದ್ರಾಕ್ಷಾಯಿಣಿ ಅವರಿಗೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾರೆ.

ಹಲ್ಲೆ ಮಾಡಿದ ಬಳಿಕ ಅವರು ಧರಿಸಿದ್ದ ಚಿನ್ನಡ ಒಡವೆಗಳನ್ನು ದೋಚಿ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡಿರುವ ದ್ರಾಕ್ಷಾಯಿಣಿ ಅವರನ್ನು ಮೈಸೂರಿನ ಕೆ.ಆರ್.‌ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ನಂಜನಗೂಡು ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

14 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

14 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

16 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

18 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

21 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

21 hours ago