ಮೈಸೂರು: ನಂಜನಗೂಡಿನ ದೇವಿರಮ್ಮನಹಳ್ಳಿ ಸಿಗ್ನಲ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್‌ಗೆ ನಡುವೆ ಡಿಕ್ಕಿಯಾಗಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.
ಸಿಂಧುವಳ್ಳಿ ಗ್ರಾಮದ ಬೊಮ್ಮೇಗೌಡ (70) ಮೃತರಾದವರು. ಸೋಮವಾರ ಸಂಜೆ ಸಿಂಧುವಳ್ಳಿಯಿಂದ ನಂಜನಗೂಡು ಪಟ್ಟಣಕ್ಕೆ ತಮ್ಮ ಮಗನ ಜೊತೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ದೇವಿರಮ್ಮನಳ್ಳಿ ಸಿಗ್ನಲ್ ಬಳಿ ಚಲಾಯಿಸುವಾಗ ಇಂಬದಿಯಿಂದ ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್ ಬೈಕ್ ಹ್ಯಾಂಡಲ್‌ಗೆ ಸೋಕಿದೆ. ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಇಬ್ಬದಿ ಕುಳಿತಿದ್ದ ಬೊಮ್ಮೇಗೌಡ ನೆಲಕ್ಕೆ ಬಿದ್ದಾಗ ಬಸ್ ಚಕ್ರಗಳ ಕಾಲಿನ ಮೇಲೆ ಹರಿದಿದೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದ್ಯೊಯ್ದರು ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ನಂಜನಗೂಡು ಸಂಚಾರಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಸಾರಿಗೆ ಬಸ್ ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಬೈಕ್‌ನಲ್ಲಿದ್ದ ಮತ್ತೊಬ್ಬ ವ್ಯಕ್ತಿ ಮಹೇಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…