ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ.
ಸುಮಾರು 2 ವರ್ಷದ ಹೆಣ್ಣು ಚಿರತೆ ಬೋನಿನಲ್ಲಿ ಸೆರೆಯಾಗಿದ್ದು, ಬೋನಿನಲ್ಲಿ ಕಟ್ಟಿದ್ದ ನಾಯಿಯನ್ನು ಹಿಡಿಯಲು ಬಂದಿದ್ದ ವೇಳೆ ಬಲೆಗೆ ಬಿದ್ದಿದೆ.
ಚುಂಚನಹಳ್ಳಿ ಸುತ್ತಮುತ್ತ ಹಲವು ದಿನಗಳಿಂದ ಚಿರತೆಗಳ ಹಾವಳಿ ಹೆಚ್ಚಾಗಿತ್ತು. ಚಿರತೆಗಳ ಓಡಾಟದಿಂದ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಚುಂಚನಹಳ್ಳಿ ಮಾತ್ರವಲ್ಲದೆ ಕೋಣನೂರು, ಹನುಮನಪುರ, ಪಿ.ಮರಹಳ್ಳಿ ಹಾಗೂ ದಾಸನೂರು ಗ್ರಾಮಗಳಲ್ಲೂ ಚಿರತೆಗಳ ಹಾವಳಿ ಕಂಡುಬಂದಿತ್ತು.
ಇತ್ತೀಚೆಗೆ ಜಾನುವಾರುಗಳ ಮೇಲೆ ಚಿರತೆಗಳು ದಾಳಿ ನಡೆಸಿದ್ದ ಹಿನ್ನೆಲೆಯಲ್ಲಿ ರೈತರಲ್ಲಿ ಭೀತಿ ಹೆಚ್ಚಾಗಿತ್ತು.
ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಬೋನು ಇರಿಸಿ ಚಿರತೆಯ ಸೆರೆಗೆ ಕಾರ್ಯಾಚರಣೆ ನಡೆಸಿತ್ತು. ಇದೀಗ 2 ವರ್ಷದ ಹೆಣ್ಣು ಚಿರತೆ ಬೋನಿಗೆ ಬಿದ್ದಿದ್ದು, ಗ್ರಾಮಸ್ಥರು ಕೊಂಚ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…
ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…
ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…