ನಂಜನಗೂಡು: ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ನಂಜನಗೂಡು ಪಟ್ಟಣದಲ್ಲಿ ನಡೆದಿದೆ.
ನಂಜನಗೂಡಿನ ಶ್ರೀರಾಂಪುರ ಬಡಾವಣೆ ಮತ್ತು 5ನೇ ಕ್ರಾಸ್‌ನಲ್ಲಿ ಈ ಘಟನೆ ನಡೆದಿದ್ದು, ಅಭಿನಾಗರಭೂಷಣ್ ಹಾಗೂ ಸಂತೋಷ್ ಎಂಬುವವರ ಕಾರು ಬೆಂಕಿಗೆ ಆಹುತಿಯಾಗಿದೆ.
ಮಧ್ಯರಾತ್ರಿ ಈ ಎರಡು ಕಾರುಗಳ ಮೇಲೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಕೂಡಲೇ ಸ್ಥಳೀಯರು ನೀರು ಎರಚಿ ಬೆಂಕಿಯನ್ನು ನಂದಿಸುವ ಮೂಲಕ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ.
ಈ ಘಟನೆಯು ನಂಜನಗೂಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಮತ್ತೊಂದು ಸಾಕ್ಷಿಯಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.





