Mysore
27
overcast clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಶ್ರೀ ಮಾಳೀಗೇಶ್ವರಿ ದೇವಾಲಯದ ಸಮೀಪದ ಚಿಕ್ಕ ನಾಲೆಯಲ್ಲಿ ಗಂಡು ಮಗುವಿನ ಮೃತದೇಹ ಪತ್ತೆಯಾಗಿದೆ. ಮಗುವಿಗೆ ಜನ್ಮ ನೀಡಿದ ತಾಯಿಯೇ ಶಿಶುವನ್ನು ನಾಲೆಗೆ ಎಸೆದು ಹೋಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಸ್ಥಳೀಯರು ಮಗುವಿನ ಶವ ಕಂಡು ತಕ್ಷಣ ಬಿಳಿಗೆರೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಮಾಹಿತಿ ಪಡೆದ ಬಿಳಿಗೆರೆ ಪೊಲೀಸ್ ಠಾಣೆಯ ಪಿಎಸ್‌ಐ ಕರಿಬಸಪ್ಪ ಮತ್ತು ಸಿಡಿಪಿಒ ರಾಘವೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಾಲೆಯಿಂದ ಶಿಶುವಿನ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Tags:
error: Content is protected !!