ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶ್ರೀ ಮಾಳೀಗೇಶ್ವರಿ ದೇವಾಲಯದ ಸಮೀಪದ ಚಿಕ್ಕ ನಾಲೆಯಲ್ಲಿ ಗಂಡು ಮಗುವಿನ ಮೃತದೇಹ ಪತ್ತೆಯಾಗಿದೆ. ಮಗುವಿಗೆ ಜನ್ಮ ನೀಡಿದ ತಾಯಿಯೇ ಶಿಶುವನ್ನು ನಾಲೆಗೆ ಎಸೆದು ಹೋಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಸ್ಥಳೀಯರು ಮಗುವಿನ ಶವ ಕಂಡು ತಕ್ಷಣ ಬಿಳಿಗೆರೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಮಾಹಿತಿ ಪಡೆದ ಬಿಳಿಗೆರೆ ಪೊಲೀಸ್ ಠಾಣೆಯ ಪಿಎಸ್‌ಐ ಕರಿಬಸಪ್ಪ ಮತ್ತು ಸಿಡಿಪಿಒ ರಾಘವೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಾಲೆಯಿಂದ ಶಿಶುವಿನ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…