ಮೈಸೂರು

ನಂಜನಗೂಡು| 3 ವರ್ಷ ಕಳೆದರೂ ಸಿಗದ ನೀರಿನ ಭಾಗ್ಯ: ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸಿಂಗಾರಿಪುರ ಗ್ರಾಮದಲ್ಲಿ ಕಳೆದ ಮೂರು ವರ್ಷದ ಹಿಂದೆ ನಿರ್ಮಾಣವಾದ ವಾಟರ್‌ ಟ್ಯಾಂಕ್‌ನಲ್ಲಿ ನೀರಿನ ಭಾಗ್ಯವೇ ದೊರೆತಿಲ್ಲ. ಆದರೆ ಅಧಿಕಾರಿಗಳು ಮಾತ್ರ ಕಣ್ಣು ಮುಚ್ಚಿ ಕುಳಿತಿದ್ದಾರೆ.

ತಾಲ್ಲೂಕಿನ ಸಿಂಗಾರಿಪುರ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯಲ್ಲಿ ವಾಟರ್ ಟ್ಯಾಂಕ್ ಅನ್ನು 2021-22 ನೇ ಸಾಲಿನಲ್ಲಿ ಹೆಡತಲೆ ಗ್ರಾಮ ಪಂಚಾಯಿತಿ ವತಿಯಿಂದ ನಿರ್ಮಾಣ ಮಾಡಲಾಯಿತು. ಆದರೆ ಲಕ್ಷ ,ಲಕ್ಷ ಹಣದಲ್ಲಿ ನಿರ್ಮಾಣವಾಗಿರುವ ವಾಟರ್ ಟ್ಯಾಂಕ್‌ಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳು, 3 ವರ್ಷ ಕಳೆದರೂ ನೀರಿನ ಭಾಗ್ಯ ಕಲ್ಪಿಸಿಯೇ ಇಲ್ಲ.

ನೀರಿನ ಭಾಗ್ಯ ದೊರೆಯದಿರುವ ಕಾರಣ ಬೇಸತ್ತ ಗ್ರಾಮಸ್ಥರು 3 ವರ್ಷಗಳ ಹಿಂದೆ ನಿರ್ಮಾಣವಾಗಿರುವ ಟ್ಯಾಂಕ್‌ಗೆ ನೀರು ತುಂಬಿಸಿ ಅದರಿಂದ ನೀರು ಬಿಡುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಆದರೆ ಅದಕ್ಕೆ ಕ್ಯಾರೆ ಎನ್ನದಿರುವ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ.

ಇನ್ನು ಉಪಯೋಗಕ್ಕೆ ಬಾರದ ಹೊಸ ಟ್ಯಾಂಕ್‌ನಿಂದ ನೀರು ಬಿಡದಿದ್ದರೆ ಪ್ರತಿಭಟನೆ ಮಾಡುವುದಾಗಿ ಗ್ರಾಮಸ್ಥರ ಎಚ್ಚರಿಕೆ ನೀಡಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

3 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

3 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

3 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

3 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

3 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

4 hours ago