ನಂಜನಗೂಡು: ಕೌಟುಂಬಿಕ ಕಲಹ ಪತಿಯ ಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನ ಹುಂಡುವಿನಹಳ್ಳಿ ಬಡಾವಣೆ ಬಳಿ ನಡೆದಿದೆ.
ರಾಜೇಂದ್ರ ಕೊಲೆಯಾದ ವ್ಯಕ್ತಿಯಾಗಿದ್ದು, ಸಂಗೀತಾ ಪತಿಯನ್ನೇ ಕೊಲೆ ಮಾಡಿದ ಪತ್ನಿಯಾಗಿದ್ದಾಳೆ. ಸದ್ಯ ಸಂಗೀತಾ ಹಾಗೂ ಗ್ಯಾಂಗನ್ನು ಬಂಧಿಸಲಾಗಿದ್ದು, ಮಾಡಿದ ತಪ್ಪನ್ನು ಆಕೆ ಒಪ್ಪಿಕೊಂಡಿದ್ದಾಳೆ.
ಹುಂಡುವಿನಹಳ್ಳಿಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ರಾಜೇಂದ್ರ ಹಾಗೂ ಸಂಗೀತಾಳನ್ನು ಕಾರಿನಲ್ಲಿ ಬಂದ ಗ್ಯಾಂಗ್ ಅಡ್ಡಗಟ್ಟಿತ್ತು. ಈ ವೇಳೆ ಕಾರಿನಿಂದ ಇಳಿದುಬಂದ ವ್ಯಕ್ತಿಯೊಬ್ಬ ರಾಜೇಂದ್ರ ಜೊತೆ ಜಗಳ ಮಾಡಿದ್ದಾನೆ. ಸಂಗೀತ ಕತ್ತಿನಲ್ಲಿದ್ದ ಚೈನ್ ಕಿತ್ತುಕೊಳ್ಳಲು ಯತ್ನಿಸಿದ್ದಾನೆ. ಹರಿತವಾದ ಆಯುಧದಿಂದ ರಾಜೇಂದ್ರನಿಗೆ ತಿವಿದಿದ್ದಾನೆ. ಇದೇ ವೇಳೆ ಮತ್ತೊಂದು ವಾಹನ ಬಂದಿದ್ದರಿಂದ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ.
ಗಂಭೀರವಾಗಿ ಗಾಯಗೊಂಡಿದ್ದ ರಾಜೇಂದ್ರ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಾಜೇಂದ್ರ ಸಾವನ್ನಪ್ಪಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರಿಗೆ ಇದು ಕೊಲೆ ಎಂಬುದು ಗೊತ್ತಾಗಿದೆ. ಆರೋಪಿಗಳನ್ನು ಹಿಡಿದು ವಿಚಾರಣೆ ನಡೆಸಿದಾಗ ಪತ್ನಿ ಸಂಗೀತಾಳೆ ದರೋಡೆ ನೆಪದಲ್ಲಿ ಪತಿ ಕೊಲೆ ಮಾಡಿಸಿದ್ದ ವಿಚಾರ ಬಯಲಾಗಿದೆ.
ಈ ಕೃತ್ಯದಲ್ಲಿ ಓರ್ವ ಅಪ್ರಾಪ್ತ ಕೂಡ ಭಾಗಿಯಾಗಿದ್ದಾನೆ. ಸದ್ಯ ಸಂಗೀತಾ, ಸಂಜಯ್, ಇನ್ನೋರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಕೃತ್ಯಕ್ಕೆ ಬಳಸಿದ್ದ ಬಾರಿಗೆ ಕಾರನ್ನು ವಶಕ್ಕೆ ಪಡೆಯಲಾಗಿದೆ.
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ…
ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು…
ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…