ಮೈಸೂರು: ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಕುರಿ ಬಲಿಯಾಗಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಗ್ರಾಮದ ರೈತ ಮಹಿಳೆ ರಾಜಮ್ಮ ಎಂಬುವವರಿಗೆ ಸೇರಿದ ಕುರಿ ಮರಿ ಬಲಿಯಾಗಿರುವುದು. ರಾಜಮ್ಮ ಎಂದಿನಂತೆ ಕುರಿಯನ್ನು ಮೇಯಿಸಿಕೊಂಡು ಸಂಜೆ ವೇಳೆ ಮನೆಯತ್ತ ವಾಪಸ್ಸಾಗುವ ವೇಳೆ ಊರಿನಂಚಿನಲ್ಲಿರುವ ಕೆರೆ ಬಳಿ ಚಿರತೆಯು ಕುರಿ ಮೇಲೆರಗಿದೆ. ಈ ವೇಳೆ ಅಲ್ಲೇ ಇದ್ದ ಗ್ರಾಮಸ್ಥರು ಕೂಗಾಡಿದ ನಂತರ ಚಿರತೆ ಕುರಿಯ ಕಳೇಬರವನ್ನು ಅಲ್ಲೇ ಬಿಟ್ಟು ಹೋಗಿದೆ.
ಗ್ರಾಮದಲ್ಲಿ ಪದೇ ಪದೇ ಜಾನುವಾರುಗಳ ಮೇಲೆ ಚಿರತೆ ದಾಳಿಗಳು ನಡೆಯುತ್ತಿದೆ. ಇದರಿಂದ ಗ್ರಾಮದ ರೈತರು ಜಾನುವಾರುಗಳನ್ನು ಮೇಯಿಸುವುದಕ್ಕೆ ಹೋಗಲು ಭಯಬೀತರಾಗಿದ್ದಾರೆ. ಅರಣ್ಯ ಅಧಿಕಾರಿಗಳು ಕಾಡುಪ್ರಾಣಿಗಳ ಹಾವಳಿ ತಪ್ಪಿಸಲು ನಿರ್ಲಕ್ಷ ವಹಿಸಿರುವುದರಿಂದಲೇ ಇಂತಹ ಘಟನೆಗಳು ಆಗಾಗ್ಗೆ ನಡೆಯುತ್ತಿದೆ ಎಂದು ಗ್ರಾಮದ ಸುರೇಶ್ ತಿಳಿಸಿದ್ದಾರೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…