ಮೈಸೂರು: ನಂಜನಗೂಡಿನ ಸುಜಾತಪುರಂ ಬಳಿಯ ರೈಲ್ವೇ ಮೇಲ್ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಲೋಡ್ ಟೆಸ್ಟ್ ಬಳಿಕ ಸದ್ಯದಲ್ಲೇ ಸಂಚಾರಕ್ಕೆ ಮುಕ್ತವಾಗಲಿದೆ.
ಆ ಮೂಲಕ ದಶಕಗಳ ಬೇಡಿಕೆಗಳಿಗೆ ಈಗ ಪ್ರತಿಫಲ ದೊರೆಯಲಿದೆ. ದಕ್ಷಿಣ ಕಾಶಿ ನಂಜನಗೂಡಿಗೆ ಬರುವ ಭಕ್ತರು, ಪ್ರವಾಸಿಗರು ಹಾಗೂ ಅಂತರರಾಜ್ಯ ಪ್ರಯಾಣಿಕರು ಈ ಹಾದಿಯಿಂದ ಸುಗಮ ಸಂಚಾರ ದೊರೆಲಿದೆ.
ಮೈಸೂರು-ಚಾಮರಾಜನಗರ ನಡುವೆ ರೈಲುಗಳ ಸಂಖ್ಯೆ ಹೆಚ್ಚಾಗಿದ್ದು, ನಂಜನಗೂಡಿನ ಸುಜಾತಪುರಂ ರೈಲ್ವೇ ಗೇಟ್ ಬಳಿ ವಾಹನಗಳು ನಿಲ್ಲುತ್ತಿದ್ದರಿಂದ ಹೆದ್ದಾರಿಯಲ್ಲಿನ ಸಂಚಾರಕ್ಕೂ ಅಡ್ಡಿಯಾಗುತ್ತಿತ್ತು. ಜತೆಗೆ ಪದೇಪದೆ ಗೇಟ್ ಹಾಕುತ್ತಿದ್ದರಿಂದ ಸವಾರರು ರೋಸಿದ್ದರು. ಹಾಗಾಗಿ ದಶಕಗಳಿಂದ ಮೇಲ್ಸೇತುವೆಗಾಗಿ ಸಾಕಷ್ಟು ಪ್ರತಿಭಟನೆಗಳು ನಡೆದಿದ್ದವು. ಸ್ಥಳೀಯ ಜನಪ್ರತಿನಿಧಿ, ಅಧಿಕಾರಿಗಳು ಸೇರಿದಂತೆ ಸಚಿವರಿಗೂ ಮನವಿ ಸಲ್ಲಿಸಲಾಗಿತ್ತು. ಸದ್ಯ ಎಲ್ಲವೂ ಮುಕ್ತಾಯ ಹಂತಕ್ಕೆ ಬಂದಿದ್ದು, ಚಾಮರಾಜನಗರ-ಮೈಸೂರು ಕಡೆ ಸಂಚಾರಿಸುವವರಿಗೆ ಇನ್ಮುಂದೆ ರೈಲು ಗೇಟ್ ಕಾಯುವ ತಲೆ ನೋವು ಇರುವುದಿಲ್ಲ.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…