ಮೈಸೂರು

ನಂಜನಗೂಡು: ಜಿಂಕೆಯ ಮಾಂಸ ಕಡಿಯುತ್ತಿದ್ದ ವ್ಯಕ್ತಿಯ ಬಂಧನ

ನಂಜನಗೂಡು: ಜಿಂಕೆಯ ಮಾಂಸ ಕಡಿಯುತ್ತಿದ್ದ ವ್ಯಕ್ತಿಯ ಬಂಧನನಾಯಿಗಳ ದಾಳಿಗೆ ಮೃತಪಟ್ಟ ಜಿಂಕೆಯ ಮಾಂಸವನ್ನು ಕಡಿಯುತ್ತಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ.

ತಾಲೂಕಿನ ಕೊತ್ತನಹಳ್ಳಿ ಗ್ರಾಮದ ಓಂಕಾರ್ ಅರಣ್ಯ ಪ್ರದೇಶದಲ್ಲಿ ಜಿಂಕೆಯೊಂದನ್ನು ನಾಯಿಗಳು ಬೇಟೆಯಾಡಿವೆ. ನಾಯಿಗಳ ದಾಳಿಕೆ ಜಿಂಕೆ ಬಲಿಯಾಗಿದ್ದು, ನಾಯಿಗಳು ಭೇಟಿಯಾಡಿದ್ದ ಜಿಂಕೆಯನ್ನು ಕೊತ್ತನಹಳ್ಳಿ ಗ್ರಾಮದ ಗಣೇಶ್ (48), ಮತ್ತು ಕೃಷ್ಣ (32) ಎಂಬುವವರು ಮಾಂಸವನ್ನು ಕತ್ತರಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಇದರಲ್ಲಿ ಗಣೇಶ್ ಎಂಬಾತನನ್ನು ಇಲಾಖಾ ಅಧಿಕಾರಿಗಳು ಬಂಧಿಸಲಾಗಿದ್ದು, ಮತ್ತೋರ್ವ ಕೃಷ್ಣ ಸ್ಥಳದಿಂದ ಪರಾರಿಯಾಗಿದ್ದಾನೆ.

ಅರಣ್ಯ ಇಲಾಖೆ ಅಧಿಕಾರಿಗಳು ಜಿಂಕೆಯ ಮಾಂಸ ಮತ್ತು ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಪರಾರಿಯಾಗಿರುವ ವ್ಯಕ್ತಿಗಾಗಿ ಅಧಿಕಾರಿಗಳು ಬಲೆ ಬೀಸಿದ್ದಾರೆ.

ಓಂಕಾರ್ ಅರಣ್ಯ ವ್ಯಾಪ್ತಿಯ ವಲಯ ಅರಣ್ಯಾಧಿಕಾರಿ ಸತೀಶ್ ಹಾಗೂ ಸಿಬ್ಬಂದಿಗಳು ಈ ದಾಳಿ ಮಾಡಿದ್ದು, ಪ್ರಕರಣ ದಾಖಲಾಗಿದೆ.

andolanait

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

8 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

8 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

8 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

8 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

8 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

9 hours ago