ಮೈಸೂರು: ಮಳೆಯಿಂದ ಉಂಟಾದ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್. ಸಿ ಮಹದೇವಪ್ಪ ಶನಿವಾರ(ಆ.3) ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿದರು.
ನಂಜನಗೂಡು ವ್ಯಾಪ್ತಿಯ ಪ್ರವಾಹ ಪೀಡಿತ ಪ್ರದೇಶವಾದ ಬೊಕ್ಕಹಳ್ಳಿ ಗ್ರಾಮಕ್ಕೆ ಬೇಟಿ ನೀಡಿ ಪ್ರವಾಹದಿಂದ ಹಾನಿ ಆಗಿರುವ ಬೆಳೆ ನಾಶ ಹಾಗೂ ಮನೆಗಳಿಗೆ ನೀರು ನುಗ್ಗಿ ಹಾನಿ ಆಗಿರುವ ಕುರಿತು ಪರಿಶೀಲನೆ ನಡೆಸಿದರು.
ನಂತರ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ತೆರೆದಿರುವ ಕಾಳಜಿ ಕೇಂದ್ರಕ್ಕೆ ಬೇಟಿ ನೀಡಿ ಸಂತ್ರಸ್ತರ ಯೋಗಕ್ಷೇಮವನ್ನು ವಿಚಾರಿಸಿದರು. ಶಾಲೆಯ ಪಕ್ಕದ ಅಂಗನವಾಡಿ ಕೇಂದ್ರದಲ್ಲಿ ಸಂತ್ರಸ್ತರಿಗೆ ವೈದ್ಯಕೀಯ ನೆರವು ನೀಡಲಾಗುತ್ತಿದ್ದು, ಈ ಸಂಬಂಧ ಪರಿಶೀಲನೆ ನಡೆಸಿ ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಕಬಿನಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬಂದಿದ್ದರಿಂದ ಪ್ರವಾಹ ಉಂಟಾಗಿ ರೈತರ ಬೆಳೆ ಹಾಗೂ ಮನೆ ಹಾನಿ ಉಂಟಾಗಿದೆ. ಮೈಸೂರು ಜಿಲ್ಲಾಡಳಿತ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರಿಂದ ಕಡಿಮೆ ಪ್ರಮಾಣದ ಹಾನಿ ಆಗಿದೆ. ಎನ್ ಡಿ ಆರ್ ಎಫ್ ನಿಯಮಾವಳಿ ಪ್ರಕಾರ ಪರಿಹಾರ ನೀಡಲಾಗುವುದು. 46 ಮನೆಗಳಿಗೆ ನೀರು ಬಂದಿದೆ. ಗಂಜಿ ಕೇಂದ್ರದಲ್ಲಿ 446 ಜನ ಸೌಲಭ್ಯ ಪಡೆಯುತ್ತಿದ್ದಾರೆ. 80 ಕುಟುಂಬಗಳು ಪ್ರವಾಹದಿಂದ ಪೀಡಿತರಾಗಿದ್ದಾರೆ. ಈ 80 ಕುಟುಂಬಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ವಹಿಸಲಾಗುವುದು ಎಂದು ಸಚಿವ ಹೆಚ್ ಸಿ ಮಹದೇವಪ್ಪ ತಿಳಿಸಿದರು.
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…