ಮೈಸೂರು : ಕಬಿನಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಜಲಾಶಯದಿಂದ ೭೦ ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಇದರಿಂದಾಗಿ ನಂಜನಗೂಡು ಬಳಿಯ ಮೈಸೂರು ಊಟಿ ರಸ್ತೆ ಬಂದ್ ಆಗಿದೆ.
ಚಿಕ್ಕಯ್ಯನ ಛತ್ರ ಗ್ರಾಮದಿಂದ ಮಲ್ಲನಮೂಲೆ ಮಠದ ವರೆಗೆ ರಸ್ತೆ ಸಂಪೂರ್ಣವಾಗಿ ಜಲಾವೃತವಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ಇನ್ನು ಹೆದ್ದಾರಿ ಬಂದ್ ಆಗಿರುವ ಕಾರಣ ಮೈಸೂರು ಊಟಿ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗಗಳ ಮೂಲಕ ಸಂಚಾರಕ್ಕೆ ವ್ಯವಸ್ಥೆಯನ್ನು ಮಾಡಲಾಗಿದೆ. ಮೈಸೂರಿನಿಂದ ನಂಜನಗೂಡು, ಗುಂಡ್ಲುಪೇಟೆ ಕಡೆ ಹೋಗುವ ವಾಹನಗಳು ತಾಂಡವಪುರದ ಬಳಿ ಎಡಕ್ಕೆ ತಿರುಗಿ ಕೆಂಪಿಸಿದ್ದನಹುಂಡಿ, ಹೆಜ್ಜಿಗೆ ಮಾರ್ಗದ ಮೂಲಕ ನಂಜನಗೂಡು ಸಂಚರಿಸಲು ಸೂಚನೆ ನೀಡಲಾಗಿದೆ.
ಗುಂಡ್ಲುಪೇಟೆ, ನಂಜನಗೂಡಿನಿಂದ ಮೈಸೂರಿಗೆ ಬರುವ ವಾಹನಗಳು ಕಲ್ಲಹಳ್ಳಿ ಗೊದ್ದನಪುರದ ಮೂಲಕ ಹೊಸ ಸೇತುವೆ ಮೂಲಕ ಹೋಗಲು ಸೂಚನೆ ನೀಡಲಾಗಿದೆ. ಇನ್ನು ಕೆಲವು ಪ್ರಯಾಣಿಕರಂತು ಬದಲಿ ಮಾರ್ಗ ಹುಡುಕಿಕೊಂಡು ಹೋಗಲು ಸಾಕಷ್ಟು ಪರದಾಟ ನಡೆಸುತ್ತಿದ್ದಾರೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…