ನಂಜನಗೂಡು: ಸತತವಾಗಿ ನಾಲ್ಕು ದಿನಗಳಿಂದ ಸುರಿಯುತ್ತಿದ ಭಾರಿ ನಂಜನಗೂಡಿನ ಜನತೆ ಅಕ್ಷರಶಃ ನಲುಗಿ ಹೋಗಿದ್ದಾರೆ. ಹಳ್ಳ, ಕೊಳ್ಳ, ಕೆರೆ, ಕಟ್ಟೆಗಳು ತುಂಬಿ ಹರಿಯುತ್ತಿದೆ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ, ಮನೆಗಳು ಕುಸಿದು ಜನರ ಬದುಕು ಚಿಂತಾಜನಕವಾಗಿದೆ.
ರಾಜ್ಯಾದ್ಯಂತ ನಿರಂತರವಾಗಿ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ನಂಜನಗೂಡಿನ ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶದ ಜನತೆ ಶೋಚನೀಯ ಸ್ಥಿತಿ ತಲುಪಿದ್ದಾರೆ. ಬಿಟ್ಟುಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಪಟ್ಟಣದ ನೀಲಕಂಠ ನಗರ ಬಡಾವಣೆಯ ಹಲವಾರು ಮನೆಯ ಗೋಡೆಗಳು ಶಿಥಿಲಗೊಂಡಿದೆ. ಮನೆಗಳಿಗೆ ನೀರು ನುಗ್ಗಿ ವಸ್ತುಗಳಿಗೆಲ್ಲ ಹಾನಿ ಉಂಟಾಗಿದ್ದು ರಾತ್ರಿ ಇಡೀ ನಿದ್ರೆ ಇಲ್ಲದೇ ಮನೆಯ ಮಾಲೀಕರು ಮಳೆಯ ನೀರನ್ನು ಹೊರಗೆ ಹಾಕುತ್ತಿರುವುದು ಕಂಡುಬಂತು.
ಶಾಲೆಗೆ ನುಗ್ಗಿದ ನೀರು : ಸಿಂಧುವಳ್ಳಿ ಗ್ರಾಮದ ಪಕ್ಕದಲ್ಲಿರುವ ಮೊರಾರ್ಜಿ ದೇಸಾಯಿ ಶಾಲೆಗೆ ನೀರು ನುಗ್ಗಿದ ಹಿನ್ನೆಲೆಯಲ್ಲಿ ಶಾಲೆಗೆ ರಜೆಯನ್ನು ನೀಡಲಾಗಿತ್ತು. ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಮೂಕನಕಟ್ಟೆ ಕೆರೆ ಸಂಪೂರ್ಣವಾಗಿ ಭರ್ತಿಯಾಗಿ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಮೊರಾರ್ಜಿ ದೇಸಾಯಿ ಶಾಲೆಯ ಭೋಜನಾಲಯ ಬಾಲಕರ ವಸತಿ ನಿಲಯ ಹಾಗೂ ಶೌಚಾಲಯಗಳಲ್ಲಿ ನೀರು ನುಗ್ಗಿ ಅವಾಂತರವನ್ನು ಸೃಷ್ಟಿ ಮಾಡಿದ್ದು ತಾಲ್ಲೂಕಿನ ವಿವಿಧೆಡೆ ಹಲವು ಶಾಲೆಗಳು ಮತ್ತು ಅಂಗನವಾಡಿಗಳ ಗೋಡೆಗಳು ಶಿಥಿಲ ವ್ಯವಸ್ಥೆಯಿಂದ ಕೂಡಿದೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…