Mysore
18
few clouds

Social Media

ಬುಧವಾರ, 28 ಜನವರಿ 2026
Light
Dark

ನಂಜನಗೂಡು| ತೆಂಗಿನ ಮರದಿಂದ ಬಿದ್ದು ಕಾರ್ಮಿಕ ಸಾವು

ನಂಜನಗೂಡು: ತೆಂಗಿನ ಮರದಿಂದ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹುಣಸವಾಳು ಗ್ರಾಮದಲ್ಲಿ ನಡೆದಿದೆ.

ಇದನ್ನು ಓದಿ: ಹನೂರು| ಕಾಡಾನೆ ದಾಳಿ ವ್ಯಕ್ತಿ ಸಾವು

ಕಾರ್ಮಿಕ ಲಿಂಗರಾಜು (35) ಎಂಬುವವರೇ ತೆಂಗಿನಮರದಿಂದ ಬಿದ್ದು ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ. ಸಂತೋಷ್ ಎಂಬುವವರಿಗೆ ಸೇರಿದ ತೆಂಗಿನ ತೋಟದಲ್ಲಿ ಹುಲ್ಲಹಳ್ಳಿಯ ಮಂಜು ಎಂಬಾತ ಗುತ್ತಿಗೆ ಪಡೆದು 5 ಕಾರ್ಮಿಕರನ್ನು ಕಾಯಿ ಕೀಳಲು ಕರೆದುಕೊಂಡಿದ್ದಾಗ, ರಕ್ಷಣಾ ಸಾಧನಗಳಿಲ್ಲದೇ ಮರ ಹತ್ತುವ ಸಂದರ್ಭದಲ್ಲಿ ಲಿಂಗರಾಜು ಕೆಳಗೆ ಬಿದ್ದು ಸಾವಿಗೀಡಾಗಿದ್ದಾರೆ.

ಘಟನಾ ಸ್ಥಳಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ್ ಭೇಟಿ ನೀಡಿ ಕುಟುಂಬಕ್ಕೆ ವೈಯಕ್ತಿಕ ಪರಿಹಾರ ನೀಡಿ ಸಾಂತ್ವನ ಹೇಳಿದ್ದಾರೆ. ಈ ಘಟನೆ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೋಟದ ಮಾಲೀಕ ಮತ್ತು ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲಿಸುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.

Tags:
error: Content is protected !!