ತಿ.ನರಸೀಪುರ: ಇಲ್ಲಿನ ತ್ರಿವೇಣಿ ಸಂಗಮದಲ್ಲಿ 13ನೇ ಕುಂಭಮೇಳ ನಡೆಯುತ್ತಿದ್ದು, ಜಿಲ್ಲಾಡಳಿ ಸಕಲ ಸಿದ್ದತೆ ಮಾಡಿಕೊಂಡಿದೆ. ಪಟ್ಟಣದಲ್ಲಿ ಸಂಭ್ರಮ ಮನೆ ಮಾಡಿದೆ.
ಪೊಲೀಸರು, ಅಧಿಕಾರಿಗಳು, ಸ್ವಚ್ಛತಾ ಸಿಬ್ಬಂದಿ, ಈಜುಗಾರರು ಸೇರಿದಂತೆ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ತ್ರಿವೇಣಿ ಸಂಗಮಕ್ಕೆ ಹೆಚ್ಚು ಜನರು ಬರುವುದರಿಂದ ಪ್ರತಿ ಹಂತದಲ್ಲಿ ಸುಗಮ ಸಂಚಾರಕ್ಕೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಭದ್ರತೆಗೆ ನಿಯೋಜಿಸಿರುವ ಪೊಲೀಸ್ ಸಿಬ್ಬಂದಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅವರು ಭದ್ರತೆ ಕುರಿತು ಮುನ್ನೆಚ್ಚರಿಕೆಯಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸೂಚನೆ ನೀಡಿದ್ದಾರೆ.
ಭದ್ರತೆಗೆ 4 ಎಡಿಎಸ್‌ಪಿ, 10 ಡಿಎಸ್‌ಪಿ, 25 ಇನ್‌ಸ್ಪೆಕ್ಟರ್‌ಗಳು, 85 ಪಿಎಸ್‌ಐ, 85 ಎಎಸ್‌ಐ, 650 ಪೊಲೀಸರು ಇದ್ದಾರೆ. ಇವರೊಂದಿಗೆ 4 ಕೆಎಸ್‌ಆರ್‌ಪಿ, 6 ಡಿಎಆರ್, 300 ಹೋಮ್‌ಗಾರ್ಡ್ ತಂಡಗಳನ್ನು ನಿಯೋಜಿಸಲಾಗಿದೆ.





