ಮೈಸೂರು: ದೇಶದಲ್ಲಿ ಕಳೆದ ೧೦ ವರ್ಷಗಳಿಂದ ಅರಾಜಕತೆ, ಕೋಮು ದ್ವೇಷ, ಸಂವಿಧಾನವನ್ನು ಕೊನೆಗೊಳಿಸುವಲ್ಲಿ ಹಾಗೂ ಹಿಂದುತ್ವದಲ್ಲಿ ಹೆಸರಿನಲ್ಲಿ ಬಿಜೆಪಿ ಪಕ್ಷವೂ ಜಾತಿ, ಧರ್ಮಗಳ ಆಧಾರದ ಮೇಲೆ ಜನರ ಮತಗಳನ್ನು ಕೇಳುತ್ತಿದೆ. ಪ್ರದಾನಿ ನರೇಂದ್ರ ಮೋದಿ ಒಬ್ಬ ಸುಳ್ಳಿನ ವಂಚಕ .ಹೀಗಾಗಿ ಮತದಾರರೆಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಮತದಾನ ಮಾಡಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಕೆ.ಶಿವರಾಂ ತಿಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ, ಸಂವಿಧಾನ ಸಂರಕ್ಷಣ ಹೋರಾಟ ಸಮಿತಿ ಹಾಗೂ ಅಲ್ಪಸಂಖ್ಯಾತ ಒಕ್ಕೂಟ ಸಂಘದ ವತಿಯಿಂದ ಏರ್ಪಡಿಸಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಅಭಿವೃಧ್ದಿ ಮಾಡಿ ಮತ ಕೇಳೂತ್ತಿಲ್ಲ. ಅದರ ಬದಲಾಗಿ ಧರ್ಮದ ಆಧಾರದ ಮೇಲೆ ರಾಜಕಾರಣ ಮಾಡಿದ್ದು, ಇಂದು ದೇಶದಲ್ಲಿ ಮೋದಿ ಅವರ ಮುಖವಾಡ ಕಳಚುವಂತೆ ಮಾಡಿದೆ ಎಂದು ಆರೋಪಿಸಿದರು.
ರಾಜ್ಯದ ಜನತೆಗಾಗಿ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದಿರುವ ಮುಖ್ಯ ಮಂತ್ರಿಯವರು ಅಹಿಂದಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಹೇಳಲು ಬಿಜೆಪಿ ಪಕ್ಷಕ್ಕೆ ನಾಚಿಕೆಯಾಗಬೇಕು ಎಂದು ಟೀಕಿಸಿದರು.
ಬಿಜೆಪಿ ಪಕ್ಷವೂ ದೇಶದಲ್ಲಿ ಆರ್‌ಎಸ್‌ಎಸ್ ಮೂಲಕ ಮುಸ್ಲೀಮರನ್ನು ಟಾರ್ಗೆಟ್ ಮಾಡಿ ಹಿಂದೂ-ಮುಸ್ಲೀಮರನ್ನು ಕೋಮುಗಲಭೆ ಉಂಟಾಗುವಂತೆ ಮಾಡಿದೆ. ಕಳೆದ ೧೦ ವರ್ಷಗಳಲ್ಲಿ ಕೇಂದ್ರದಲ್ಲಿ ಬಿಜೆಪಿ ಜನರಿಗೆ ಚೊಂಬು ಕೊಟ್ಟಿದೆ. ಬಿಜೆಪಿಗೆ ಅಭಿವೃದ್ದಿ ಬೇಕಾಗಿಲ್ಲ ಎಂದರು.
ನಾಳೆ ದುಂಡುಮೇಜಿನ ಅಹಿಂದಾ ಸಭೆ : ನಗರದ ಗುರು ರೆಸಿಡೆನ್ಸಿಯಲ್ಲಿ ಏ.೨೪ರಂದು ಬೆಳಿಗ್ಗೆ ೧೧ಕ್ಕೆ ದುಂಡು ಮೇಜಿನ ಅಹಿಂದ ಸಭೆ ನಡೆಯಲಿದೆ. ಅದರಲ್ಲಿ ಅಹಿಂದ ಮುಖಂಡರು ಭಾಗಿಯಾಗಲಿದ್ದಾರೆ ಎಂದು ಶಿವರಾಂ ಹೇಳಿದರು.
ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ರಾಜಾಧ್ಯಕ್ಷ ಭಾಸ್ಕರ್, ಅಲ್ಪಸಂಖ್ಯಾತ ಒಕ್ಕೂಟದ ರಾಜ್ಯಾಧ್ಯಕ್ಷ ಕಲೀಲ್, ದಲಿತ ಮುಖಂಡ ಎ.ಆರ್.ಕಾಂತರಾಜು, ವಿವಿಧ ಸಂಘಟನೆಗಳ ಜಿಲ್ಲಾಧ್ಯಕ್ಷರಾದ ಯೋಗೇಶ್ ಉಪ್ಪಾರ್, ಎಚ್.ಪ್ರಕಾಶ್, ಮೊಗ್ಗಣ್ಣಚಾರ್, ರವಿನಂದನ್ ಹಾಗೂ ಅಹಿಂದ ಮುಖಂಡ ಲೋಕೇಶ್ ಮಾದಪುರ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…