ಮೈಸೂರು

ನರೇಂದ್ರ ಮೋದಿ ಸುಳ್ಳುಗಾರ ಹಾಗೂ ವಂಚಕ : ಕೆ.ಶಿವರಾಂ

ಮೈಸೂರು: ದೇಶದಲ್ಲಿ ಕಳೆದ ೧೦ ವರ್ಷಗಳಿಂದ ಅರಾಜಕತೆ, ಕೋಮು ದ್ವೇಷ, ಸಂವಿಧಾನವನ್ನು ಕೊನೆಗೊಳಿಸುವಲ್ಲಿ ಹಾಗೂ ಹಿಂದುತ್ವದಲ್ಲಿ ಹೆಸರಿನಲ್ಲಿ ಬಿಜೆಪಿ ಪಕ್ಷವೂ ಜಾತಿ, ಧರ್ಮಗಳ ಆಧಾರದ ಮೇಲೆ ಜನರ ಮತಗಳನ್ನು ಕೇಳುತ್ತಿದೆ. ಪ್ರದಾನಿ ನರೇಂದ್ರ ಮೋದಿ ಒಬ್ಬ ಸುಳ್ಳಿನ ವಂಚಕ .ಹೀಗಾಗಿ ಮತದಾರರೆಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಮತದಾನ ಮಾಡಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಕೆ.ಶಿವರಾಂ ತಿಳಿಸಿದರು.

ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ, ಸಂವಿಧಾನ ಸಂರಕ್ಷಣ ಹೋರಾಟ ಸಮಿತಿ ಹಾಗೂ ಅಲ್ಪಸಂಖ್ಯಾತ ಒಕ್ಕೂಟ ಸಂಘದ ವತಿಯಿಂದ ಏರ್ಪಡಿಸಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಅಭಿವೃಧ್ದಿ ಮಾಡಿ ಮತ ಕೇಳೂತ್ತಿಲ್ಲ.  ಅದರ ಬದಲಾಗಿ ಧರ್ಮದ ಆಧಾರದ ಮೇಲೆ ರಾಜಕಾರಣ ಮಾಡಿದ್ದು, ಇಂದು ದೇಶದಲ್ಲಿ ಮೋದಿ ಅವರ ಮುಖವಾಡ ಕಳಚುವಂತೆ ಮಾಡಿದೆ ಎಂದು ಆರೋಪಿಸಿದರು.

ರಾಜ್ಯದ ಜನತೆಗಾಗಿ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದಿರುವ ಮುಖ್ಯ ಮಂತ್ರಿಯವರು ಅಹಿಂದಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಹೇಳಲು ಬಿಜೆಪಿ ಪಕ್ಷಕ್ಕೆ ನಾಚಿಕೆಯಾಗಬೇಕು ಎಂದು ಟೀಕಿಸಿದರು.

ಬಿಜೆಪಿ ಪಕ್ಷವೂ ದೇಶದಲ್ಲಿ ಆರ್‌ಎಸ್‌ಎಸ್ ಮೂಲಕ ಮುಸ್ಲೀಮರನ್ನು ಟಾರ್ಗೆಟ್ ಮಾಡಿ ಹಿಂದೂ-ಮುಸ್ಲೀಮರನ್ನು ಕೋಮುಗಲಭೆ ಉಂಟಾಗುವಂತೆ ಮಾಡಿದೆ. ಕಳೆದ ೧೦ ವರ್ಷಗಳಲ್ಲಿ ಕೇಂದ್ರದಲ್ಲಿ ಬಿಜೆಪಿ ಜನರಿಗೆ ಚೊಂಬು ಕೊಟ್ಟಿದೆ. ಬಿಜೆಪಿಗೆ ಅಭಿವೃದ್ದಿ ಬೇಕಾಗಿಲ್ಲ ಎಂದರು.

ನಾಳೆ ದುಂಡುಮೇಜಿನ ಅಹಿಂದಾ ಸಭೆ : ನಗರದ ಗುರು ರೆಸಿಡೆನ್ಸಿಯಲ್ಲಿ ಏ.೨೪ರಂದು ಬೆಳಿಗ್ಗೆ ೧೧ಕ್ಕೆ ದುಂಡು ಮೇಜಿನ ಅಹಿಂದ ಸಭೆ ನಡೆಯಲಿದೆ. ಅದರಲ್ಲಿ ಅಹಿಂದ ಮುಖಂಡರು ಭಾಗಿಯಾಗಲಿದ್ದಾರೆ ಎಂದು ಶಿವರಾಂ ಹೇಳಿದರು.

ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ರಾಜಾಧ್ಯಕ್ಷ ಭಾಸ್ಕರ್, ಅಲ್ಪಸಂಖ್ಯಾತ ಒಕ್ಕೂಟದ ರಾಜ್ಯಾಧ್ಯಕ್ಷ ಕಲೀಲ್, ದಲಿತ ಮುಖಂಡ ಎ.ಆರ್.ಕಾಂತರಾಜು, ವಿವಿಧ ಸಂಘಟನೆಗಳ ಜಿಲ್ಲಾಧ್ಯಕ್ಷರಾದ ಯೋಗೇಶ್ ಉಪ್ಪಾರ್, ಎಚ್.ಪ್ರಕಾಶ್, ಮೊಗ್ಗಣ್ಣಚಾರ್, ರವಿನಂದನ್ ಹಾಗೂ ಅಹಿಂದ ಮುಖಂಡ ಲೋಕೇಶ್ ಮಾದಪುರ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

14 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

14 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

15 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

15 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

15 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

15 hours ago