Mysore
21
broken clouds

Social Media

ಬುಧವಾರ, 16 ಸೆಪ್ಟೆಂಬರ್ 2026
Light
Dark

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ ಭೇಟಿಯ ನೆನಪಿನಲ್ಲಿ ನಿರ್ಮಿಸಲಾಗಿರುವ ‘ವಿವೇಕ ಸ್ಮಾರಕ’ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ಆಗಮಿಸುತ್ತಿದ್ದು, ಇಡೀ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ಪ್ರವಾಸದ ವೇಳಾಪಟ್ಟಿ
ಮಧ್ಯಾಹ್ನ 2:55 – ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮನ
ಮಧ್ಯಾಹ್ನ 3:15 – ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ನಗರದ ಓವಲ್ ಮೈದಾನಕ್ಕೆ ಆಗಮನ
ಮಧ್ಯಾಹ್ನ 3:25 – ಓವಲ್ ಮೈದಾನದಿಂದ ರಸ್ತೆ ಮಾರ್ಗವಾಗಿ ವಿವೇಕ ಸ್ಮಾರಕಕ್ಕೆ ತೆರಳಲಿರುವ ಮೋದಿ, ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿ 5 ನಿಮಿಷಗಳ ಕಾಲ ಧ್ಯಾನ ಮಾಡಲಿದ್ದಾರೆ.
ಮಧ್ಯಾಹ್ನ 3:30 – ಸಂಜೆ 5:15: ರಾಮಕೃಷ್ಣ ಆಶ್ರಮದ ಶಾಲಾ ಆವರಣದಲ್ಲಿ ನಡೆಯುವ ಪ್ರಮುಖ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿ
ಸಂಜೆ 5:55 – ಮೈಸೂರು ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ನವದೆಹಲಿಗೆ ನಿರ್ಗಮನ

ಈ ವಿಶೇಷ ಕಾರ್ಯಕ್ರಮದಲ್ಲಿ ಪ್ರಸಿದ್ಧ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿರುವ ಸ್ವಾಮಿ ವಿವೇಕಾನಂದರ ಅತ್ಯಾಕರ್ಷಕ ಏಕಶಿಲಾ ಮೂರ್ತಿಯನ್ನು ಪ್ರಧಾನಿ ಮೋದಿಯವರಿಗೆ ನೆನಪಿನ ಕಾಣಿಕೆಯಾಗಿ ನೀಡಲಾಗುತ್ತದೆ.

ಮೈಸೂರು ಭೇಟಿಯ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ 1892ರಲ್ಲಿ ಸ್ವಾಮಿ ವಿವೇಕಾನಂದರು ಮೈಸೂರಿಗೆ ನೀಡಿದ್ದ ಐತಿಹಾಸಿಕ ಭೇಟಿಯ ನೆನಪಿನಲ್ಲಿ ಈ ಸ್ಮಾರಕ ನಿರ್ಮಾಣಗೊಂಡಿದೆ. ನಮ್ಮ ಯುವಜನತೆಯನ್ನು ಸಬಲೀಕರಣಗೊಳಿಸುವಲ್ಲಿ ಹಾಗೂ ಸ್ವಾಮಿ ವಿವೇಕಾನಂದರ ಉದಾತ್ತ ಚಿಂತನೆಗಳನ್ನು ಪ್ರಚಾರಪಡಿಸುವಲ್ಲಿ ಇದು ಸದಾ ಮುಂಚೂಣಿಯಲ್ಲಿರಲಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರಧಾನಿಯವರ ಭೇಟಿಯ ಹಿನ್ನೆಲೆಯಲ್ಲಿ ಎಸ್‌ಪಿಜಿ (SPG) ಪಡೆ ಹಾಗೂ ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಧಾನಿ ಸಂಚರಿಸುವ ಮಾರ್ಗ ಹಾಗೂ ಕಾರ್ಯಕ್ರಮದ ಸ್ಥಳಗಳಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.

Tags:
error: Content is protected !!