ಮೈಸೂರು: ಇದೇ ಆಗಸ್ಟ್ 27ರಂದು ತಮಿಳುನಾಡಿನ ತಿರುಚಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯೇತರ) ರಾಷ್ಟ್ರೀಯ ರೈತ ಸಮಾವೇಶ ನಡೆಯಲಿದೆ ಎಂದು ಈ ಬಗ್ಗೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ತಮಿಳುನಾಡಿನ ತಿರುಚಿಯಲ್ಲಿ ನಡೆಯುವ ರೈತ ಸಮಾವೇಶಕ್ಕೆ ಕರ್ನಾಟಕದಿಂದ ನೂರಾರು ಸಂಖ್ಯೆಯ ರೈತರು ಭಾಗವಹಿಸುತ್ತಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟ, ಸರ್ವೋಚ್ಚ ನ್ಯಾಯಾಲಯದ ಸೂಚನೆ ಬಗ್ಗೆ ಚರ್ಚಿಸಿ ಮುಂದಿನ ಹೋರಾಟದ ಬಗ್ಗೆ ಈ ಸಮಾವೇಶದಲ್ಲಿ ತೀರ್ಮಾನಿಸಲಾಗುವುದು.
ರಾಷ್ಟ್ರದ ಎಲ್ಲಾ ರಾಜ್ಯಗಳ ರೈತ ಮುಖಂಡರು ಈ ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ. ಕಾವೇರಿ ಹೆಚ್ಚುವರಿ ನೀರನ್ನು ಮೇಕೆದಾಟು ಜಲಾಶಯ ನಿರ್ಮಿಸಿ ಸಂಕಷ್ಟಕಾಲದಲ್ಲಿ ನೀರನ್ನ ಬಳಸಿಕೊಳ್ಳುವ ಬಗ್ಗೆ ತಮಿಳುನಾಡಿನ ರೈತ ಮುಖಂಡರ ಜೊತೆ 28 ರಂದು ತಂಜಾವೂರಿಯಲ್ಲಿ ಸಭೆ ನಡೆಸಿ ಚರ್ಚಿಸಲಾಗುವುದು ಎಂದು ತಿಳಿಸಿದರು.
ಮೆಕ್ಕೆಜೋಳ ಎಂ.ಎಸ್.ಪಿ. ಖರೀದಿ ಬೆಲೆ ನಿಗದಿಯಾಗಿದೆ. ರೈತರು ಸ್ಥಳೀಯ ಮಾರುಕಟ್ಟೆಯಲ್ಲಿ 4000 ಮಾರಾಟ ಮಾಡುತ್ತಿರುವುದು ನಿಲ್ಲಿಸಿ. ಕೇಂದ್ರ ಸರ್ಕಾರ ಖರೀದಿ ಕೇಂದ್ರ ಆರಂಭಿಸಲು ಸೂಚನೆ ನೀಡಿದೆ ರಾಜ್ಯ ಸರ್ಕಾರ ಕೂಡಲೇ ಆರಂಭಿಸಬೇಕು. ರೈತರು ಕಡಿಮೆ ಬೆಲೆಗೆ ಮಾರಿ ನಷ್ಟವಾಗುವುದು ತಪ್ಪುತ್ತದೆ ಎಂದು ರೈತರಲ್ಲಿ ಮನವಿ ಮಾಡುತ್ತೇನೆ ಎಂದು ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯೇತರ) ಸಂಘಟನೆಯ ದಕ್ಷಿಣ ಭಾರತ ಸಂಚಾಲಕ ಕುರುಬೂರ್ ಶಾಂತಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಡ್ಯ: ರಾಷ್ಟ್ರದ ಜಿಡಿಪಿಯಲ್ಲಿ ಕೃಷಿ ಪಾಲು ಶೇ.೨೦ ರಷ್ಟು ಇದ್ದು, ಶೇ.೬೦ ರಷ್ಟು ಜನರು ಕೃಷಿ ಅವಲಂಭಿಸಿದ್ದಾರೆ. ಆದ್ದರಿಂದ ರಾಷ್ರ್ಟದ…
ಕುವೈತ್/ನವದೆಹಲಿ: 26ನೇ ಅರೇಬಿಯನ್ ಗಲ್ಫ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದು, ಕುವೈತ್ ದೊರೆ ಶೇಖ್ ಮಿಶಾಲ್…
371 J ಕೊಡುಗೆಯಾಗಿ 371 ಬೆಡ್ ಗಳ ಆಸ್ಪತ್ರೆ: ಸಿಎಂ ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ…
‘ಅಂಬೇಡ್ಕರ್ ಅಂಬೇಡ್ಕರ್ ಎನ್ನುವುದು ಈಗ ಒಂದು ಫ್ಯಾಶನ್ ಆಗಿಬಿಟ್ಟಿದೆ. ಹೀಗೆ ಹೇಳುವವರು ಭಗವಂತನ ಹೆಸರನ್ನಾದರೂ ಇಷ್ಟು ಬಾರಿ ಸ್ಮರಿಸಿದ್ದರೆ ಅವರಿಗೆ…
ರಸ್ತೆ ಬದಿಯೇ ಕಸದ ವಾಹನ ನಿಲುಗಡೆಗೊಳಿಸಬೇಕಾದ ಪರಿಸ್ಥಿತಿ; ದುರ್ವಾಸನೆಯಿಂದ ಸಾರ್ವಜನಿಕರಿಕೆ ಕಿರಿಕಿರಿ ಕೃಷ್ಣ ಸಿದ್ದಾಪುರ ಸಿದ್ದಾಪುರ: ಪಟ್ಟಣದಲ್ಲಿ ಕಸ ವಿಲೇವಾರಿ…
ಭೇರ್ಯ: ಸಂಜೆ ನಂತರ ನಿಲ್ದಾಣದೊಳಗೆ ಬಾರದ ಬಸ್‌ಗಳು; ಕುಡಿಯುವ ನೀರು, ಪಾರ್ಕಿಂಗ್ ವ್ಯವಸ್ಥೆ ಇಲ್ಲ ಭೇರ್ಯ ಮಹೇಶ್ ಭೇರ್ಯ: ಗ್ರಾಮದ…