ಮೈಸೂರು: ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಇಂದು ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ವಿವಿಧ ಪ್ರಭೇದದ ಸುಮಾರು 200 ಸಸಿಗಳನ್ನು ಕಾಲೇಜು ಉದ್ಯಾನವನದಲ್ಲಿ ನೆಡಲಾಯಿತು. ಕಾಲೇಜಿನಲ್ಲಿರುವ ಎರಡು ಘಟಕಗಳ ಸುಮಾರು 200 ವಿದ್ಯಾರ್ಥಿಗಳು ಸಸಿಗಳನ್ನು ನೆಟ್ಟು ನೀರೆರೆದರು.
ಕಾಲೇಜಿನ ಅಧ್ಯಾಪಕರು ಮತ್ತು ಅಧ್ಯಾಪಕೇತರ ಸಿಬ್ಬಂದಿ ಸುಮಾರು 7 ಸಾವಿರ ರೂಪಾಯಿ ಮೌಲ್ಯದ ಸಸಿಗಳನ್ನು ಕೊಡುಗೆಯಾಗಿ ನೀಡಿದರು. ವಿದ್ಯಾರ್ಥಿಗಳು ಅವುಗಳನ್ನು ನೆಟ್ಟು ನೀರೆರೆದರು.
ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ನಟರಾಜ್ ಕೆ ಅವರು ಮಾತನಾಡಿ ಗಿಡಗಳನ್ನು ಉಳಿಸಿ ಬೆಳೆಸಲು ಸಲಹೆ ನೀಡಿದರು.
ಗಿಡ ಮರಗಳು ನಮಗೆ ಜೀವ ಜೀವನ ಎರಡನ್ನು ನೀಡುತ್ತವೆ. ಹಾಗಾಗಿ ಜೀವ ನೀಡುವ ಜೀವಗಳನ್ನು ಸ್ವಾಭಾವಿಕವಾಗಿ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ. ಅದನ್ನು ಮರೆತ ಕಾರಣ ಒಂದು ಕಾರ್ಯಕ್ರಮ ಮಾಡಿ ಗಿಡಗಳನ್ನು ನಾವು ನೆಡುವ ಸ್ಥಿತಿಗೆ ತಲುಪಿದ್ದೇವೆ. ಇದು ಅನಿವಾರ್ಯ. ಆದರೂ ಗಿಡ ನೆಟ್ಟು, ಉಳಿಸಿ ಬೆಳೆಸುವುದು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲ ಪ್ರೊ.ಎಂ.ಅಬ್ದುಲ್ ರಹಿಮಾನ್ ರಾಷ್ಟ್ರೀಯ ಸೇವಾ ಯೋಜನೆ ಮೂಲಕ ನಾವು ಕಾಡು ಉಳಿಸಿ ಬೆಳೆಸುವುದರ ಜತೆಗೆ ಗ್ರಾಮೀಣ ಭಾಗದಲ್ಲಿ ಜನರ ಸೇವೆ ಮತ್ತು ಸವಲತ್ತು ಕುರಿತು ಅರಿವು ಮೂಡಿಸಿ ಗ್ರಾಮೀಣ ಪ್ರದೇಶದ ಅಭಿವೃದ್ಧಿ ಪಥದತ್ತ ಹೋಗಲು ಸಹಕಾರಿ ಆಗಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಅಧಿಕಾರಿಗಳಾದ ಡಾ.ಲಕ್ಷ್ಮಣ ಬಿ, ಪ್ರೊ.ಶುಭಾ ಬಿ.ಎಸ್, ಅಧ್ಯಾಪಕ ಸಂಘದ ಕಾರ್ಯದರ್ಶಿ ರಮೇಶ ಕೆ.ಎಲ್, ಸಾಂಸ್ಕೃತಿಕ ಸಮಿತಿ ಸಂಚಾಲಕ ಗೋವಿಂದರಾಜು, ಅಧ್ಯಾಪಕರಾದ ಸುಧಾ, ಲೀಲಾವತಿ, ಪ್ರಮೀಳಾ ಎಚ್.ಸಿ.ಬೃಂದಾ ಎನ್. ಮಧುಮತಿ, ಸುರೇಶ್, ಅಧ್ಯಾಪಕೇತರರು, ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿ ಪ್ರತಿನಿಧಿಗಳಾದ ರಮ್ಯಾ ಡಿ, ಶಿವಾಲಿ, ಸುಚಿತ್ರಾ, ಸ್ನೇಹ, ಸೌಂದರ್ಯ, ರಂಜಿತ ಆರ್ ಸೇರಿದಂತೆ ಸುಮಾರು 200 ಸ್ವಯಂ ಸೇವಕರು ಪಾಲ್ಗೊಂಡಿದ್ದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…