Mysore
27
scattered clouds
Light
Dark

ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಮೈಸೂರು ಶಿಕ್ಷಕ

ಮೈಸೂರು: 2024ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಕರ್ನಾಟಕದ ಇಬ್ಬರು ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ.

ಮೈಸೂರು ಜಿಲ್ಲೆ ಹುಣಸೂರಿನ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನ ಉಪನ್ಯಾಸಕರಾದ ಎಚ್.ಎನ್.ಗಿರೀಶ್‌ ಹಾಗೂ ಬೆಂಗಳೂರು ಗ್ರಾಮಾಂತರ ವಿಭಾಗದ ದೊಡ್ಡಬಳ್ಳಾಪುರದ ಬಾಶೆಟ್ಟಿ ಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ಆರ್.ನಾರಾಯಣಸ್ವಾಮಿ 2024ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರಾಗಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭವು ಸೆಪ್ಟೆಂಬರ್.‌5, 2024ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿದೆ. ಪ್ರಶಸ್ತಿಯು ಮೆರಿಟ್‌ ಪ್ರಮಾಣಪತ್ರ 50,000 ರೂಗಳ ನಗದು ಬಹುಮಾನ ಮತ್ತು ಬೆಳ್ಳಿ ಪದಕವನ್ನು ಒಳಗೊಂಡಿದೆ.

ಅತ್ಯಂತ ಉದಯೋನ್ಮುಖ ಹಾಗೂ ಉತ್ಸಾಹಿ ಶಿಕ್ಷಕರಾದ ಎಚ್.ಎನ್.ಗಿರೀಶ್‌ ಅವರು, ಹುಣಸೂರಿನ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಜೀವಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಸಹೋದರ ಎಚ್.ಎನ್.ವೆಂಕಟೇಶ್‌ ಮೈಸೂರಿನ ಹಿರಿಯ ವಕೀಲರಾಗಿದ್ದಾರೆ.