ಮೈಸೂರು: 2024ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಕರ್ನಾಟಕದ ಇಬ್ಬರು ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ.
ಮೈಸೂರು ಜಿಲ್ಲೆ ಹುಣಸೂರಿನ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನ ಉಪನ್ಯಾಸಕರಾದ ಎಚ್.ಎನ್.ಗಿರೀಶ್ ಹಾಗೂ ಬೆಂಗಳೂರು ಗ್ರಾಮಾಂತರ ವಿಭಾಗದ ದೊಡ್ಡಬಳ್ಳಾಪುರದ ಬಾಶೆಟ್ಟಿ ಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ಆರ್.ನಾರಾಯಣಸ್ವಾಮಿ 2024ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರಾಗಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭವು ಸೆಪ್ಟೆಂಬರ್.5, 2024ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿದೆ. ಪ್ರಶಸ್ತಿಯು ಮೆರಿಟ್ ಪ್ರಮಾಣಪತ್ರ 50,000 ರೂಗಳ ನಗದು ಬಹುಮಾನ ಮತ್ತು ಬೆಳ್ಳಿ ಪದಕವನ್ನು ಒಳಗೊಂಡಿದೆ.
ಅತ್ಯಂತ ಉದಯೋನ್ಮುಖ ಹಾಗೂ ಉತ್ಸಾಹಿ ಶಿಕ್ಷಕರಾದ ಎಚ್.ಎನ್.ಗಿರೀಶ್ ಅವರು, ಹುಣಸೂರಿನ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಜೀವಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಸಹೋದರ ಎಚ್.ಎನ್.ವೆಂಕಟೇಶ್ ಮೈಸೂರಿನ ಹಿರಿಯ ವಕೀಲರಾಗಿದ್ದಾರೆ.
ಕೋಲ್ಕತ್ತಾ : ಟಿ20 ವಿಶ್ವಕಪ್ನ ಸೂಪರ್ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ…
ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…
ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…
ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…
ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…
ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…