Categories: ಮೈಸೂರು

ಪ್ರಕೃತಿ ಚಿಕಿತ್ಸಾಲಯ ಕಾಲೇಜು| ಜಿಲ್ಲಾ ಮಟ್ಟಕ್ಕೂ ವಿಸ್ತರಣೆ; ಶಾಸಕ ಹರೀಶ್‌ಗೌಡ

ಮೈಸೂರು: ಇಲ್ಲಿನ ಸರ್ಕಾರಿ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯವು ರಾಜ್ಯದ ಏಕೈಕ ವಿದ್ಯಾಲಯವಾಗಿದೆ. ಇದನ್ನು ಜಿಲ್ಲಾ ಹಾಗೂ ವಿಭಾಗೀಯ ಮಟ್ಟದಲ್ಲಿ ಸ್ಥಾಪಿಸುವಂತೆ ಸಿಎಂ ಸಿದ್ದರಾಮಯ್ಯ ಅವರ ಗಮನ ಸೆಳೆಯಲಾಗುವುದು ಎಂದು ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶ್‌ ಗೌಡ ಹೇಳಿದರು.

ಪ್ರಕೃತಿ ಚಿಕಿತ್ಸಾ ಮತ್ತುಯೋಗ ವೈದೈಕೀಯ ವಿದ್ಯಾಲಯದ ವತಿಯಿಂದ 7ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆಯ “ಆರೋಗ್ಯಕರ ಮುಪ್ಪು ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಕೃತಿ ಚಿಕಿತ್ಸೆ” ಎಂಬ ದ್ಯೇಯದಡಿಯ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪೂರ್ವಜರು ಪ್ರಾಕೃತಿಕ ಚಿಕಿತ್ಸೆಯಿಂದಲೇ ಕಾಯಿಲೆ ಗುಣಪಡಿಸಿಕೊಳ್ಳುತ್ತಿದ್ದರು. ಇಂತಹ ಪ್ರಾಕೃತಿಕ ಚಿಕಿತ್ಸಾ ಆಸ್ಪತೆಯು ರಾಜ್ಯದಲ್ಲಿ ಮೈಸೂರಿನಲ್ಲಿ ಮಾತ್ರ  ಇದೆ.  ರಾಜ್ಯಾದ್ಯಾಂತ ವಿದ್ಯಾರ್ಥಿಗಳು ಪ್ರಕೃತಿ ಚಿಕಿತ್ಸಾ ವ್ಯಾಸಂಗ ಮಾಡಲು ಮೈಸೂರಿಗೆ ಬರಬೇಕಿದೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಅಥವಾ ವಿಭಾಗ ಮಟ್ಟದಲ್ಲಿ ಸರ್ಕಾರಿ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು  ಮುಖ್ಯಮಂತ್ರಿಯವರ ಗಮನಕ್ಕೆ ತರುತ್ತೇನೆಂದು ತಿಳಿಸಿದರು.

ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದವರು ವಿದೇಶದಲ್ಲಿ ಹಾಗೂ ಅನೇಕರು ಸರ್ಕಾರಿ ಉದ್ಯೋಗದಲ್ಲಿಯೂ ಇದ್ದಾರೆ. 2006 ರಲ್ಲಿ ನಾಲ್ಕು ವಿದ್ಯಾರ್ಥಿಗಳಿಂದ ಪ್ರಾರಂಭಗೊಂಡು ಈ ಸಾಲಿಗೆ 50 ವಿದ್ಯಾರ್ಥಿಗಳಿಗೆ ಬಂದು ನಿಂತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ವಿದ್ಯಾರ್ಥಿಗಳು ಹೆಚ್ಚಾಗಲಿ ಎಂದು ಆಶಿಸಿದರು.

ಪುರುಷರ ನೂತನ ವಿದ್ಯಾರ್ಥಿ ನಿಲಯ ಉದ್ಘಾಟನೆ

ಸರ್ಕಾರಿ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವೈದ್ಯಕೀಯ ಕಾಲೇಜಿನ ಪುರುಷರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡವನ್ನು ಉದ್ಘಾಟನೆ ಮಾಡಿದ್ದೇವೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಹೇಳಿದರು.

ಆಯುರ್ವೇದ ಸಂಶೋಧನಾ ಕೇಂದ್ರದ ಸಹಾಯಕ ನಿರ್ದೇಶಕ ಡಾ.ಲಕ್ಷ್ಮಿನಾರಾಯಣ ಶೆಣೈ, ಪ್ರಾಚಾರ್ಯ ಡಾ.ಕೆ.ಎಸ್.ರಾಧಾಕೃಷ್ಣ ರಾಮರಾವ್, ಸಹಾಯಕ ಕಾರ್ಯಪಾಲಕ ಅಭಿಯಂತರ ಸಿ.ಪುಟ್ಟಸ್ವಾಮಿ, ಜಗದೀಶ್ ಸೇರಿದಂತೆ  ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಷ್ಯಾದ ಸೇನಾ ವಿಮಾನ ಪತನ: 29 ಪ್ರಯಾಣಿಕರು ಸಾವು

ಮಾಸ್ಕೋ: ತಾಂತ್ರಿಕ ದೋಷದಿಂದ ರಷ್ಯಾ ಸೇನಾ ವಿಮಾನ ಪತನಗೊಂಡ ಪರಿಣಾಮ 29 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ರಕ್ಷಣಾ ಸಚಿವಾಲಯದ…

6 mins ago

ಮುಂದಿನ 2-3 ವಾರಗಳಲ್ಲಿ ಯುದ್ಧ ಅಂತ್ಯ: ಡೊನಾಲ್ಡ್ ಟ್ರಂಪ್‌

ವಾಷಿಂಗ್ಟನ್:‌ ಮುಂದಿನ ಎರಡು ಅಥವಾ ಮೂರು ವಾರಗಳಲ್ಲಿ ಇರಾನ್‌ ವಿರುದ್ಧದ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌…

20 mins ago

ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜಯಂತ್ಯೋತ್ಸವ: ಸಿದ್ಧಗಂಗಾ ಮಠದಲ್ಲಿ ಸಂಭ್ರಮ

ತುಮಕೂರು: ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಹಿನ್ನೆಲೆಯಲ್ಲಿಂದು ಮಠದಲ್ಲಿ ಸಂಭ್ರಮ ಕಳೆಗಟ್ಟಿದೆ. ಇಂದು ಬೆಳಿಗ್ಗೆಯಿಂದಲೇ ಪೂಜಾ…

1 hour ago

ಕಾಪಿರೈಟ್‌ ಉಲ್ಲಂಘನೆ ಆರೋಪ ಪ್ರಕರಣ: ನಟ ರಕ್ಷಿತ್‌ ಶೆಟ್ಟಿಗೆ 25 ಲಕ್ಷ ರೂ ದಂಡ ವಿಧಿಸಿ ಹೈಕೋರ್ಟ್‌ ಆದೇಶ

ಬೆಂಗಳೂರು: ಕಾಪಿ ರೈಟ್‌ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ನಟ ರಕ್ಷಿತ್‌ ಶೆಟ್ಟಿ ಅವರಿಗೆ ದೆಹಲಿ ಹೈಕೋರ್ಟ್‌ 25 ಲಕ್ಷ ದಂಡ…

2 hours ago

ಹನೂರು| ಪೊನ್ನಾಚಿ ಗ್ರಾಮದಲ್ಲಿ ಜರುಗಿದ ಕುಳ್ಳುಮಾರಮ್ಮ ಹಾಗೂ ಬಸವೇಶ್ವರ ಸ್ವಾಮಿ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮದಲ್ಲಿ ಗ್ರಾಮ ದೇವತೆ ಹಬ್ಬದ ಅಂಗವಾಗಿ ಶ್ರೀ…

2 hours ago

ಹನೂರು| ಹಿಟಾಚಿ ವಾಹನಗಳಲ್ಲಿ ಬ್ಯಾಟರಿ, ಡೀಸೆಲ್‌ ಕಳ್ಳತನ: ದೂರು ದಾಖಲು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಿಂಗನ ಕಟ್ಟೆ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಹಿಟಾಚಿ ವಾಹನಗಳಲ್ಲಿ…

2 hours ago