ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ. ಮಾಧ್ಯಮಗಳಿಗೆ ನೀಡಿರುವ ಹೇಳಿಕೆಯೇ ಬೇರೆಯಾಗಿದ್ದು, ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫ್ಯಾಕ್ಟರಿಯ ಮಾಲೀಕ ಗಣಪತ್ ಲಾಲ್ ಎಂಬವರನ್ನು ಹೆಚ್ಚಿನ ವಿಚಾರಣೆಗೆ ತನ್ನ ವಶಕ್ಕೆ ನೀಡಬೇಕು ಎಂದು ಎನ್‌ಸಿಬಿ ಅಧಿಕಾರಿಗಳು ಮೈಸೂರಿನ ಮೂರನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ 41.218 ಕೆಜಿ ಕ್ರಿಸ್ಟಲಿನ್ ವಶಪಡಿಸಿಕೊಂಡಿದ್ದೇವೆ. ಅಲ್ಲದೇ, ಮೆಫೆಡ್ರಾನ್‌ಗೆ ಬದಲಿಯಾಗಿ ಬಳಕೆ ಮಾಡಲಾಗುತ್ತದೆ ಎನ್ನುವ ಶಂಕೆಯ ಮೇರೆಗೆ 1.28 ಕೆಜಿ ಕ್ರಿಸ್ಟಲ್ ಪೌಡರ್ ವಶಕ್ಕೆ ತಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಈ ಕ್ರಿಸ್ಟಲಿನ್ ಎನ್ನುವ ವಸ್ತುವನ್ನು ಸೆಮಿ ಕಂಡಕ್ಟರ್ ತಯಾರಿಕೆ, ಮೈಕ್ರೋಚಿಪ್ ತಯಾರಿಕೆ, ಸೋಲಾರ್ ಸೆಲ್‌ಗಳ ತಯಾರಿಕೆಯಲ್ಲಿ ಸಾಮಗ್ರಿಯಾಗಿ ಉಪಯೋಗಿಸಲಾಗುತ್ತದೆ ಎನ್ನುವ ಪ್ರಾಥಮಿಕ ಮಾಹಿತಿ ಎಲ್ಲರಿಗೂ ಸಿಗುತ್ತದೆ. ಆದರೆ, ಇದನ್ನು ಮುಚ್ಚಿಟ್ಟು ಮಾದಕ ವಸ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ ಎಂದು ಬಿಜೆಪಿಯವರು ಬಾಯಿ ಬಡಿದುಕೊಳ್ಳುತ್ತಿದ್ದಾರೆ ಎಂದು ದೂರಿದರು.
ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಎಲ್ಲಿಯೂ ಮೈಸೂರಿನಲ್ಲಿ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿಲ್ಲ. ಆದರೆ, ಪತ್ರಿಕಾ ಪ್ರಕಟಣೆಯಲ್ಲಿ ಮಾತ್ರ ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಉತ್ಪಾದನಾ ಘಟಕ ನಡೆಸುತ್ತಿರುವ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಎನ್‌ಸಿಬಿ ಅಧಿಕಾರಿಗಳು ಇಲ್ಲಿನ ರಾಸಾಯನಿಕ ಉತ್ಪಾದನಾ ಕೈಗಾರಿಕೆ ಮೇಲೆ ದಾಳಿ ನಡೆಸಿ, ಅತ್ಯಾಧುನಿಕ ಉಪಕರಣಗಳನ್ನು ಒಳಗೊಂಡ ರಾಸಾಯನಿಕಗಳನ್ನು ತಯಾರಿಸುವ ಸೋಗಿನಲ್ಲಿ ಮಾದಕ ದ್ರವ್ಯ ತಯಾರಿಸುತ್ತಿದ್ದ ಶಂಕೆ ಮೇಲೆ ಸುಮಾರು 500 ಕೆಜಿ ರಾಸಾಯನಿಕವನ್ನು ವಶಕ್ಕೆ ಪಡಿಸಿಕೊಳ್ಳಲಾಗಿದೆ ಎಂದು ಸುಳ್ಳು ಮಾಹಿತಿ ನೀಡಿ ಮೈಸೂರಿಗೆ ಕೆಟ್ಟ ಹೆಸರು ತರುತ್ತಿದ್ದಾರೆ ಎಂದು ಆರೋಪಿಸಿದರು.
ಈ ಪತ್ರಿಕಾ ಪ್ರಕಟಣೆಯನ್ನು ಇಟ್ಟುಕೊಂಡು ಮೈಸೂರು ಸಂಸದರು ತಲೆಬುಡ ಗೊತ್ತಿಲ್ಲದೇ ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಅವರ ಹಿರಿಯರು ಮೈಸೂರಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರ ಮರ್ಯಾದೆಯನ್ನು ಇವರು ಕಳೆಯುತ್ತಿದ್ದಾರೆ. ಇವರು ಬಂದ ನಂತರ ಮೈಸೂರು- ಕುಶಾಲನಗರ ರೈಲ್ವೆ ಯೋಜನೆ, ಪ್ರಸಾದ್ ಯೋಜನೆ, ಯೂನಿಟಿ ಮಾಲ್ ಸೇರಿದಂತೆ ಅನೇಕ ಯೋಜನೆಗಳು ಸ್ಥಗಿತಗೊಂಡಿವೆ. ಡ್ರಗ್ ಹಬ್ ಇರುವುದು ಉತ್ತರ ಭಾರತದಲ್ಲಿ. ಆದರೆ, ಮೈಸೂರು ಎಂದು ಸುಳ್ಳು ಹೇಳುತ್ತಿದ್ದಾರೆ. ಈ ಹಿಂದಿನ ಎಂಪಿಗಿಂತ ಇವರು ಸುಳ್ಳು ಹೇಳುವುದರಲ್ಲಿ ಮುಂದೆ ಸಾಗುತ್ತಿದ್ದಾರೆ ಎಂದು ಕಿಡಿಕಾರಿದರು.
ಜಿಪಂ ಮಾಜಿ ಅಧ್ಯಕ್ಷ ಬಿ.ಎಂ.ರಾಮು, ಮುಖಂಡರಾದ ಗಿರೀಶ್, ಕೆ.ಮಹೇಶ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…