ಮೈಸೂರು

ಬಿಹಾರದಲ್ಲಿ ಎನ್‌ಡಿಎ ಗೆಲುವು : ಮೈಸೂರು ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ

ಮೈಸೂರು : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟ ಪ್ರಚಂಡ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ನಗರದ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಯಿತು.

ಕಚೇರಿ ಆವರಣದಲ್ಲಿ ಶುಕ್ರವಾರ ಮಧ್ಯಾಹ್ನ ಬಿಜೆಪಿ ನಗರ ಮತ್ತು ಗ್ರಾಮಾಂತರ ಘಟಕದಿಂದ ನಡೆದ ಸಂಭ್ರಮಾಚರಣೆಯಲ್ಲಿ ಭಾಗಿಯಾದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಶಾಸಕ ಟಿ.ಎಸ್.ಶ್ರೀವತ್ಸ ಅವರ ನೇತೃತ್ವದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.

ಈ ಸಂದರ್ಭ ಮಾತನಾಡಿದ ಶಾಸಕ ಟಿ.ಎಸ್. ಶ್ರೀವತ್ಸ, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಹಾರ ಸಿಎಂ ನಿತೀಶ್ ಕುಮಾರ್ ಅವರ ಡಬಲ್ ಎಂಜಿನ್ ಸರ್ಕಾರಕ್ಕೆ ಮತದಾರರು ಗೆಲುವಿನ ಮುದ್ರೆ ಒತ್ತಿದ್ದಾರೆ. ನಿತೀಶ್ ಕುಮಾರ್ 20 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಗಮನಿಸಿ ಅಲ್ಲಿನ ಮತದಾರರು ಎನ್‌ಡಿಎಗೆ ಬೆಂಬಲ ನೀಡಿದ್ದಾರೆ ಎಂದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಅವರ ಪಕ್ಷದ ನಾಯಕರು ಮತಗಳ್ಳತನ ನಡೆಯುತ್ತಿದೆ ಎಂದು ಬೊಬ್ಬೆ ಹೊಡೆಯುತ್ತಿದ್ದರು. ಚುನಾವಣಾ ಆಯೋಗ ಇದರಲ್ಲಿ ಶಾಮೀಲಾಗಿದೆ ಎಂದು ಆರೋಪಿಸಿದ್ದರು. ಜತೆಗೆ ಚುನಾವಣೆ ಪ್ರಚಾರ ಸಂದರ್ಭ ಪ್ರಧಾನಿ ಮೋದಿ ಅವರ ತಾಯಿಯ ಬಗ್ಗೆ ಕೇವಲವಾಗಿ ಮಾತನಾಡಿದ್ದರು. ಇದರಿಂದ ಕೆರಳಿದ ಮತದಾರರು ಎನ್‌ಡಿಎ ಪರ ನಿಂತಿದ್ದಾರೆ ಎಂದರು.

ಇದನ್ನು ಓದಿ: ಬಿಹಾರ ಚುನಾವಣೆಯಲ್ಲಿ ಹಿನ್ನಡೆ : ಸಿಎಂ ಸಿದ್ದರಾಮಯ್ಯ ಹೇಳೋದೇನು?

ಬಿಹಾರದಲ್ಲಿ ಹಿಂದೆಂದಿಗಿಂತಲೂ ಭರ್ಜರಿ ಗೆಲವು ದಾಖಲಿಸಿದ್ದು, ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಸಲಾದ ಅಪಪ್ರಚಾರಗಳು ಫಲಿಸಿಲ್ಲ. ಅಪಪ್ರಚಾರಕ್ಕೆ ಸರಿಯಾದ ಉತ್ತರವನ್ನು ದೇಶದ ಜನ ನೀಡಿದ್ದಾರೆ, ಮುಂದೆಯೂ ನೀಡುತ್ತಾರೆ. ಚುನಾವಣಾ ಆಯೋಗ ಮತ ಕಳ್ಳತನ ಬಗ್ಗೆ ದೂರು ನೀಡಲು ತಿಳಿಸಿದ್ದರೂ ರಾಹುಲ್ ಗಾಂಧಿ ದೂರು ನೀಡಲು ಹೆದರಿದ್ದಾರೆ. ದೇಶದೆಲ್ಲೆಡೆ ಹಿಟ್ ಅಂಡ್ ರನ್ ಮಾತ್ರವೇ ಮಾಡಿದ್ದಾರೆ ಎಂದು ಹೇಳಿದರು.

ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ಮಾತನಾಡಿ, ಬಿಹಾರದಲ್ಲಿ ಎನ್‌ಡಿಎ ಹಿಂದೆಂದಿಗಿಂತಲೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಕಾಂಗ್ರೆಸ್ ಅಪಪ್ರಚಾರಕ್ಕೆ ಉತ್ತರ ನೀಡಿದೆ. ಪ್ರಧಾನಿ ಮೋದಿ, ನಾಯಕರಾದ ಅಮಿತ್ ಶಾ ಮತ್ತು ಜೆ.ಪಿ.ನಡ್ಡಾ ಅವರ ನಾಯಕತ್ವದಲ್ಲಿ ಒಳ್ಳೆಯ ಫಲಿತಾಂಶ ಬಂದಿದ್ದು, ಕರ್ನಾಟಕದಲ್ಲಿ ಮುಂದೆ ನಡೆಯುವ ಚುನಾವಣೆಯಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎನ್. ಸುಬ್ಬಣ್ಣ ಮಾತನಾಡಿ, ಪ್ರಧಾನಿ ನರೇಂದ್ರಮೋದಿ ನಾಯಕತ್ವದ ಆಡಳಿತಕ್ಕೆ ಮನ್ನಣೆ ನೀಡಿದ್ದಾರೆ. ರಾಹುಲ್ ಗಾಂಧಿ ಆಧಾರರಹಿತ ಆರೋಪಗಳಿಗೆ ಜನರು ಮತದಾನದ ಮೂಲಕ ಉತ್ತರ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ಮುಂದಾದರೂ ಜವಾಬ್ದಾರಿಯಾಗಿ ವರ್ತಿಸಬೇಕು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಽಕಾರ ಕಳೆದುಕೊಂಡು ಮನೆಗೆ ಹೋಗುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮುಖಂಡರಾದ ಕಿರಣ್ ಗೌಡ, ಜೋಗಿ ಮಂಜು, ಸಂತೋಷ್ ಕುಮಾರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

7 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

8 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

8 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

9 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

9 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

9 hours ago