ಮೈಸೂರು : ಈ ಬಾರಿ ನಾಡಿನಲ್ಲಿ ಉತ್ತಮವಾಗಿ ಮಳೆಯಾಗಿದ್ದು ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ಹೀಗಾಗಿ, ಮುಖ್ಯಮಂತ್ರಿಗಳು ಈ ಬಾರಿ ದಸರಾವನ್ನು ಅದ್ಧೂರಿಯಾಗಿ ಆಚರಿಸಲು ತಿಳಿಸಿದ್ದಾರೆ. ಅದರಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದರು.
ಬುಧವಾರ ವಿರನಹೊಸಹಳ್ಳಿ ಬಳಿ ಗಜ ಪಯಣಕ್ಕೆ ಅಧಿಕೃತ ಚಾಲನೆ ನೀಡಿ ಅವರು ಮಾತನಾಡಿದರು.
ಇಂದು ಮೊದಲ ಹಂತದಲ್ಲಿ 9 ದಸರಾ ಆನೆಗಳು ಮೈಸೂರಿಗೆ ಆಗಮಿಸುತ್ತಿದ್ದು, ಅಭಿಮನ್ಯು ನೇತೃತ್ವದ ಕಂಜನ್, ಏಕಲವ್ಯ, ಭೀಮ, ಲಕ್ಷ್ಮೀ, ವರಲಕ್ಷ್ಮಿ, ರೋಹಿತ್, ಧನಂಜಯ ಹಾಗೂ ಗೋಪಿ ಆನೆಗಳು ಮೈಸೂರಿಗೆ ಆಗಮಿಸಲಿವೆ. ಮೈಸೂರಿನ ಅಶೋಕಪುರದ ಅರಣ್ಯ ಭವನದಲ್ಲಿ ವಾಸ್ತವ್ಯ ಹೂಡಿ, ಅಗಸ್ಟ್ 23 ರಂದು ಅರಮನೆಗೆ ಸ್ವಾಗತ ಮಾಡಿ ಆನೆಗಳನ್ನು ಬರಮಾಡಿಕೊಳ್ಳಲಾಗುವುದು ಎಂದರು.
ಆನೆ ಕಾಡಿನ ಸಂಪತ್ತು. ವನ್ಯ ಜೀವಿಗಳು ಹಾಗೂ ವನ್ಯ ಸಂರಕ್ಷಣೆ ದೇಶಕ್ಕೆ ಅತ್ಯಗತ್ಯ. ಪರಿಸರ ಸಂರಕ್ಷಣೆ ಹಾಗೂ ವನ್ಯ ಸಂರಕ್ಷಣೆ ಮಾಡದಿದ್ದರೆ ಮಾನವ ಉಳಿಯುವುದು ಕಷ್ಟ. ಈ ವರ್ಷ ಮೈಸೂರಿನಲ್ಲಿ 40 ಡಿಗ್ರಿ ವರೆಗೆ ಉಷ್ಣಾಂಶ ಇತ್ತು. ಇದಕ್ಕೆ ಕಾರಣ ಪರಿಸರವನ್ನು ಹಾಳು ಮಾಡುತ್ತಿರುವುದು. ಆದ್ದರಿಂದ ಪರಿಸರವನ್ನು ರಕ್ಷಿಸಲು ಎಲ್ಲರೂ ಪಣತೊಡಬೇಕು ಎಂದು ಸಚಿವರು ಕರೆ ನೀಡಿದರು.
ಅರ್ಜುನ ಆನೆ 14 ಬಾರಿ ದಸರಾದಲ್ಲಿ ಭಾಗವಹಿಸಿ, 9 ಬಾರಿ ಅಂಬಾರಿ ಹೊತ್ತಿತ್ತು. ಇಂದು ವೀರ ಮರಣ ಹೊಂದಿದೆ. ಮಾನವ ಹಾಗೂ ಪ್ರಾಣಿ ಸಂಘರ್ಷ ನಡೆಯಲು ಕಾರಣ ಅರಣ್ಯ ನಾಶ ಮತ್ತು ಒತ್ತುವರಿ ಮಾಡುತ್ತಿರುವುದು ಇದನ್ನು ತಡೆಗಟ್ಟಬೇಕು ಎಂದು ಹೇಳಿದರು.
ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…
ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ…
ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ…
ಬೆಂಗಳೂರು: ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆಯನ್ನು ತಂದಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಗೃಹ ಸಚಿವ…