ಮೈಸೂರು

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನೀಟ್ ಮರು ಪರೀಕ್ಷೆ ಕುರಿತು ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನೀಟ್ ಪರೀಕ್ಷೆಯು ಜೂನ್ 21ರಂದು ಮೈಸೂರು ನಗರದಲ್ಲಿ ಒಟ್ಟು 21 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. 7886 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.

ನೀಟ್ ಪರೀಕ್ಷೆಯ ಕೋಆರ್ಡಿನೇಟರ್ ಮಿಥಿಲೇಶ್ ಕುಮಾರ್ ಮಾತನಾಡಿ, ಪರೀಕ್ಷೆಯು ಜೂನ್ 21ರಂದು ಮಧ್ಯಾಹ್ನ 2 ರಿಂದ 5 ಗಂಟೆಯವರೆಗೆ ನಡೆಯಲಿದೆ. ಪರೀಕ್ಷಾ ಕೇಂದ್ರದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಪರೀಕ್ಷಾರ್ಥಿಗಳ ತಪಾಸಣೆ ಹಾಗೂ ಬಯೋಮೆಟ್ರಿಕ್ ಪರಿಶೀಲನೆ ಪ್ರಕ್ರಿಯೆ ಪ್ರಾರಂಭವಾಗಲಿದೆ. ಮಧ್ಯಾಹ್ನ 1.30 ರೊಳಗೆ ಬರುವ ಪರೀಕ್ಷಾರ್ಥಿಗಳಿಗೆ ಮಾತ್ರ ಪರೀಕ್ಷಾ ಕೇಂದ್ರಕ್ಕೆ ಪ್ರವೇಶವಿರುತ್ತದೆ, ನಂತರ ಪ್ರವೇಶವಿರುವುದಿಲ್ಲ. ಪರೀಕ್ಷಾರ್ಥಿಗಳು ಪ್ರವೇಶ ಪತ್ರದಲ್ಲಿ ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.

ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಓರ್ವ ಪೊಲೀಸ್ ವೃತ್ತ ನಿರೀಕ್ಷಕರು, ಮೂವರು ಪುರುಷ, ಇಬ್ಬರು ಮಹಿಳಾ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಒದಗಿಸಲಾಗುವುದು ಎಂದರು.

ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಶುಚಿತ್ವ ಕಾಪಾಡುವ ಸಂಬಂಧ ಅಗತ್ಯ ಕ್ರಮವಹಿಸುವಂತೆ ಮೈಸೂರು ಮಹಾನಗರಪಾಲಿಕೆ ಅಧಿಕಾರಿಗಳಿಗೆ, ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಠಿಯಿಂದ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಾಗ ಆರೋಗ್ಯ ಸಮಸ್ಯೆ ಉಂಟಾದಲ್ಲಿ ಅಭ್ಯರ್ಥಿಗಳಿಗೆ ಚಿಕಿತ್ಸೆಯನ್ನು ನೀಡಲು ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕೆ.ಎಸ್.ಆರ್.ಟಿಸಿ ವತಿಯಿಂದ ಪರೀಕ್ಷಾ ದಿನದಂದು ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲು ಪರೀಕ್ಷಾ ಕೇಂದ್ರದ ಮಾರ್ಗದಲ್ಲಿ ನಿಗಧಿತ ಸಮಯಕ್ಕೆ ತಲುಪುವಂತೆ ಹೆಚ್ಚಿನ ಬಸ್ ವ್ಯವಸ್ಥೆ ಮಾಡುವಂತೆ ತಿಳಿಸಿದರು.

ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷೆ ನಡೆಯುವ ದಿನಗಳಂದು ನಿರಂತರ ವಿದ್ಯುತ್ ವ್ಯವಸ್ಥೆಯನ್ನು ಕಲ್ಪಿಸಲು ಸೆಸ್ಕ್ ಅಗತ್ಯ ಕ್ರಮವಹಿಸುವುದು. ಪರೀಕ್ಷಾ ದಿನಗಳಂದು ವಿಕಲಚೇತನ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಗಳಿಗೆ ಗಾಲಿಕುರ್ಚಿ ಮತ್ತು ಮೂಲಭೂತ ಅಗತ್ಯ ಕ್ರಮಗಳನ್ನು ಒದಗಿಸುವಂತೆ ತಿಳಿಸಿದರು.

ಸಭೆಯಲ್ಲಿ ನೀಟ್ ಪರೀಕ್ಷೆಯ ಕೋ ಆರ್ಡಿನೇಟರ್ ಡಾ. ಎನ್.ಆರ್. ಶ್ರೀನಾಥ್, ಜಿಲ್ಲಾಧಿಕಾರಿ ಕಚೇರಿಯ ಶಿಷ್ಠಾಚಾರ ತಹಸಿಲ್ದಾರ್ ಶಿವಪ್ರಸಾದ್, ಅಗ್ನಿಶಾಮಕ ಅಧಿಕಾರಿ ಗುರುರಾಜ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಮೈಸೂರಿನ ನೀಟ್ ಪರೀಕ್ಷಾ ಕೇಂದ್ರಗಳು:
೧.ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ.
೨.ಸರ್ಕಾರಿ ಪದವಿ ಪೂರ್ವ ಕಾಲೇಜು, ಎಂ.ಜಿ.ಕೊಪ್ಪಲು.
೩.ಮೈಸೂರು ವಿವಿ ಸ್ಕೂಲ್ ಆಫ್ ಇಂಜಿನಿಯರಿಂಗ್.
೪.ಮಹಾರಾಣಿ ಮಹಿಳಾ ವಾಣಿಜ್ಯ ಕಾಲೇಜು.
೫.ರೀಜನಲ್ ಇನ್ಸ್‌ಟಿಟ್ಯೂಟ್ ಆಫ್ ಎಜುಕೇಶನ್.
೬.ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು.
೭.ಮಹಾರಾಣಿ ಮಹಿಳಾ ಕಲಾ ಕಾಲೇಜು.
೮.ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು,ವಿಜಯನಗರ.
೯.ಸರ್ಕಾರಿ ಪದವಿ ಪೂರ್ವ ಕಾಲೇಜು,ಒಂಟಿಕೊಪ್ಪಲು.
೧೦.ಮಹಾರಾಣಿ ಸರ್ಕಾರಿ ಪದವಿ ಪೂರ್ವ ಕಾಲೇಜು.
೧೧.ಸರ್ಕಾರಿ ಸಿಪಿಸಿ ಪಾಲಿಟೆಕ್ನಿಕ್ ಕಾಲೇಜು.
೧೨.ಮಹಾರಾಜ ಸರ್ಕಾರಿ ಪದವಿ ಪೂರ್ವ ಕಾಲೇಜು.
೧೩. ಸರ್ಕಾರಿ ಪದವಿಪೂರ್ವ ಕಾಲೇಜು,ಕುವೆಂಪು ನಗರ.
೧೪.ಸರ್ಕಾರಿ ಆದರ್ಶ ವಿದ್ಯಾಲಯ, ಜಾಕಿ ಕ್ವಾರ್ಟರ್ಸ್.
೧೫.ಬೈಫರ್ಕೆಟೆಡ್ ಮಹಾರಾಜ ಸರ್ಕಾರಿ ಪದವಿ ಪೂರ್ವ ಕಾಲೇಜು, ನಜರ್‌ಬಾದ್.
೧೬.ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯ
೧೭.ಮಹಾರಾಜ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ.
೧೮.ಸರ್ಕಾರಿ ಪದವಿಪೂರ್ವ ಕಾಲೇಜು, ಅನಿಕೇತನ ರಸ್ತೆ, ಕುವೆಂಪು ನಗರ.
೧೯. ಸರ್ಕಾರಿ ಪದವಿಪೂರ್ವ ಮಹಿಳಾ ಕಾಲೇಜು, ದೇವರಾಜ ಮೊಹಲ್ಲಾ.
೨೦. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸಿದ್ದಾರ್ಥ ಲೇಔಟ್.
೨೧. ಡೆಮಾಂನ್ಸ್ಟ್ರೇಷನ್ ಸ್ಕೂಲ್ ಮೈಸೂರು.

ಆಂದೋಲನ ಡೆಸ್ಕ್

Recent Posts

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

3 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

3 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

3 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

3 hours ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

4 hours ago