ಮೈಸೂರು

ನೇಹಾ ಹತ್ಯೆ ಪ್ರಕರಣ: ವೈಯಕ್ತಿಕ ಕಾರಣಕ್ಕೆ ಕೊಲೆ ಎನ್ನುವುದು ತಪ್ಪು; ಸುಮಲತಾ

ಮೈಸೂರು: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ರಾಜಕಾರಣಿಗಳು ವಿವಿಧ ಹೇಳಿಕೆಗಳನ್ನು ನೀಡುತ್ತಿದ್ದು, ಸದ್ಯ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಸಹ ಈ ಕುರಿತು ಹೇಳಿಕೆಯನ್ನು ನೀಡಿದ್ದಾರೆ.

ನಗರದಲ್ಲಿ ಬಿಜೆಪಿ ಪರ ಪ್ರಚಾರ ಮಾಡುತ್ತಿರುವ ಸುಮಲತಾ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದಾಗ ನೇಹಾ ಹತ್ಯೆ ಪ್ರಕರಣದ ಬಗ್ಗೆ ಮಾತನಾಡಿ ʼನಾನೂ ಸಹ ಈ ವಿಚಾರವನ್ನು ಗಮನಿಸಿದ್ದೇನೆ. ಸಾಮಾಜಿಕ ಜಾಲತಾಣದಲ್ಲಿ ಒಂದಷ್ಟು ಫೋಟೊಗಳು ಹರಿದಾಡುತ್ತಿವೆ. ಈಗಾಗಲೇ ಆಕೆಯ ಹತ್ಯೆಯಾಗಿದೆ, ಆ ಜೀವ ನೊಂದಿದೆ. ಇಂತಹ ಸಂದರ್ಭದಲ್ಲಿ ಆಕೆಯ ಕ್ಯಾರೆಕ್ಟರ್‌ ಬಗ್ಗೆ ಮಾತನಾಡುವುದು ಬಹಳ ನೋವಿನ ವಿಚಾರʼ ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನೂ ಮುಂದುವರಿದು ಮಾತನಾಡಿದ ಅವರು ʼಯಾರೋ ಒಬ್ಬರು ಮಾಡಿದ ತಪ್ಪಿಗೆ ಇಡೀ ಸಮುದಾಯವನ್ನೇ ತಪ್ಪು ಎನ್ನುವುದು ಸರಿಯಲ್ಲ. ಆದರೆ ಒಂದು ಸಮುದಾಯವನ್ನು ಸಮರ್ಥನೆ ಮಾಡಿಕೊಳ್ಳುವುದು ತಪ್ಪು. ಪಾಕಿಸ್ತಾನ್‌ ಜಿಂದಾಬಾದ್‌ ಕೂಗಿದ್ದ ಪ್ರಕರಣದಲ್ಲಿ ಎಫ್‌ಎಸ್‌ಎಲ್‌ ವರದಿ ಬರುವ ಮುನ್ನವೇ ಸಮರ್ಥನೆ ಮಾಡಿಕೊಂಡ್ರಿ. ಈಗ ಇದು ವೈಯಕ್ತಿಕ ಕಾರಣಕ್ಕೆ ಆಗಿರುವ ಕೊಲೆ ಎನ್ನುವುದು ತಪ್ಪು. ತಕ್ಷಣ ಸರ್ಕಾರ ಕ್ರಮ ಕೈಗೊಳ್ಳಬೇಕುʼ ಎಂದು ಹೇಳಿದರು.

ಈ ಮೂಲಕ ಈ ಹಿಂದೆ ಸಿಎಂ ಸಿದ್ದರಾಮಯ್ಯ ವೈಯಕ್ತಿಕ ಕಾರಣಕ್ಕೆ ನೇಹಾ ಕೊಲೆಯಾಗಿದೆ ಎಂದು ನೀಡಿದ್ದ ಹೇಳಿಕೆಗೆ ಸುಮಲತಾ ಟಾಂಗ್‌ ಕೊಟ್ಟಿದ್ದಾರೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

2 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

2 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

2 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

3 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

3 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago